ಅಮಿಶ ಕೆ.ವೈ ರಿಲೇಯಲ್ಲಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

0

ಸುಬ್ರಹ್ಮಣ್ಯ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿರುವ ಬಿಳಿನೆಲೆ ಗ್ರಾಮದ ಕ್ಯೆಕಂಬ ಕೋಟೇಬಾಗಿಲು ಸಂದ್ಯಾಮಣಿ ಹಾಗೂ ದಿ. ಯೋಗೀಶ್ ಕುಮಾರ್ ಅವರ ಪುತ್ರಿ ಅಮಿಷ ಕೆ.ವೈ 4×100 ರಿಲೇಯಲ್ಲಿ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.

ಉಡುಪಿಯಲ್ಲಿ ನಡೆದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರೀಯ ಮಟ್ಟಕ್ಕೆ ಅರ್ಹತೆ ಪಡೆದಿದ್ದಾರೆ. ಇವರು ಬೆಂಗಳೂರಿನ ವಿದ್ಯಾನಗರದ ಕ್ರೀಡಾ ಶಾಲೆಯಲ್ಲಿ 8 ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಾರೆ.