ಕೊಡಿಯಾಲ: ತಂದೆ,ತಾಯಿಯ ಮೇಲೆ ಕತ್ತಿಯಿಂದ ಕಡಿದು ಗಾಯಗೊಳಿಸಿದ ಮಗನ ಬಂಧನ

0

ಮದ್ಯದ ನಶೆಯಲ್ಲಿ ಮಗನೊಬ್ಬ ಹೆತ್ತ ತಂದೆ-ತಾಯಿಯ ಮೇಲೆಯೇ ಕತ್ತಿಯಿಂದ ದಾಳಿ ನಡೆಸಿದ ಘಟನೆ ನ.20ರಂದು ಕೊಡಿಯಾಲದ ಕಲ್ಪಣೆ ಎಂಬಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಮಗನನ್ನು ಪೊಲೀಸರು ಬಂದಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ತಂದೆ-ತಾಯಿಯನ್ನು ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿತ್ತು. ಅವರಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದು ಬಂದಿದೆ. ಜಾಗದ ವಿಚಾರಕ್ಕೆ ಸಂಬಂಧಪಟ್ಟಂತೆ ಈ ಕೃತ್ಯವೆಸಗಿದ್ದು,ಆರೋಪಿ ದೇವಿ ಪ್ರಸಾದ್‌ ಆಚಾರ್ಯ
ಬಂಧಿತ ಆರೋಪಿ. ಈತ ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಿವಾಸಿಗಳಾದ ಮಂಜುನಾಥ್ ಆಚಾರ್, ಧರ್ಮಾವತಿ ದಂಪತಿ ಪುತ್ರ.