ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯದ ವಿದ್ಯಾರ್ಥಿಗಳು ಡಯಟ್ ಧಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ಜನಸಂಖ್ಯಾ ಶಿಕ್ಷಣ ಯೋಜನೆಯ ಪಾತ್ರಾಭಿನಯ ಹಾಗು ಜನಪದ ನೃತ್ಯ ಈ ಎರಡೂ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ಒರಿಸ್ಸಾ ರಾಜ್ಯದ ಭುವನೇಶ್ವರದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.