ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ ಪದವಿ ಪೂರ್ವ ಕಾಲೇಜಿನಲ್ಲಿ ಅನೀಮಿಯ ಮುಕ್ತ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮದಡಿಯಲ್ಲಿ ಮಕ್ಕಳ ರಕ್ತಹೀನತೆ ತಪಾಷಣೆ ಮತ್ತು ಚಿಕಿತ್ಸಾ ಕಾರ್ಯಕ್ರಮ ನ. 22 ರಂದು ಕಾಲೇಜ್ ಸಭಾಂಗಣದಲ್ಲಿ ನಡೆಯಿತು.
ಕರ್ನಾಟಕ ಸರ್ಕಾರ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಶಾಲಾ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಇದರ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದ ಉದ್ಘಾಟನೆಯನ್ನು ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ನೆರವೇರಿಸಿದರು.
ಸುಳ್ಯ ತಾಲೂಕು ಆರೋಗ್ಯ ಕಛೇರಿ ವೈದ್ಯಾಧಿಕಾರಿ ಡಾ. ಭವ್ಯಾ ಮನೋಹರ ಪ್ರಾಸ್ತಾವಿಕವಾಗಿ ಮಾತನಾಡಿ ರಕ್ತಹೀನತೆಯಿಂದ ಉಂಟಾಗುವ ಸಮಸ್ಯೆಗಳು ಮತ್ತು ಅದರ ನಿವಾರಣೆಗೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ವೇದಿಕೆಯಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಕನಕಾಂಗಿ,ಸಮುದಾಯ ಆರೋಗ್ಯಾಧಿಕಾರಿಗಳಾದ ರಶ್ಮಿ ,ಸುನೀತಾ, ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು,ವಿದ್ಯಾರ್ಥಿಗಳು ಭಾಗವಹಿಸಿದ್ದರು.