ಐವರ್ನಾಡು ಗ್ರಾಮ ಪಂಚಾಯತ್ ಉದ್ಯೋಗ ಖಾತರಿ ಯೋಜನೆಯ ಗ್ರಾಮ ಸಭೆ

0

ಐವರ್ನಾಡು ಗ್ರಾಮ ಪಂಚಾಯತ್ 2024-25 ನೇ ಸಾಲಿನ ಮಹಾತ್ಮಗಾಂಧಿ ರಾಷ್ಡ್ರೀಯ ಉದ್ಯೋಗ ಖಾತರಿ ಯೋಜನೆಯ ಕಾರ್ಮಿಕ ಆಯವ್ಯಯ ತಯಾರಿಕ ಅಂಗವಾಗಿ ವಿಶೇಷ ಗ್ರಾಮ ಸಭೆಯು ನ.22 ರಂದು ಗ್ರಾಮ ವಿಕಾಸ ಸಭಾಭವನದಲ್ಲಿ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲೀಲಾವತಿ ಕುತ್ಯಾಡಿ ಅಧ್ಯಕ್ಷತೆ ವಹಿಸಿದ್ದರು.


ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್ ಸ್ವಾಗತಿಸಿ , ಉದ್ಯೋಗ ಖಾತರಿ ಯೋಜನೆಯ ಬಗ್ಗೆ ಪ್ರಾಸ್ತಾವಿಕ ಮಾತನಾಡಿದರು.
ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಸದಸ್ಯರು,ಗ್ರಾಮಸ್ಥರು ಸಭೆಯಲ್ಲಿ ಪಾಲ್ಗೊಂಡಿದ್ದರು.