ರಾಜ್ಯಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಅಭಿನಂದನ್ ಬಾಂಜಿಕೋಡಿಗೆ ಚಿನ್ನ

0

ಕರ್ನಾಟಕ ರಾಜ್ಯ ವೈಟ್ ಲಿಫ್ಟರ್ಸ್ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನವೆಂಬರ್ 18, 19ರಂದು ನಡೆದ ರಾಜ್ಯಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸುಳ್ಯ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಅಭಿನಂದನ್ ಬಾಂಜಿಕೋಡಿ 81 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.


ಅಭಿನಂದನ್ ಐವರ್ನಾಡು ಗ್ರಾಮದ ಬಾಂಜಿಕೋಡಿ ಸದಾಶಿವ ಮತ್ತು ಶ್ರೀಮತಿ ನಯನಾರವರ ಪುತ್ರ.