ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಜನಜಾಗೃತಿ ವೇದಿಕೆ ಸುಳ್ಯ ಪ್ರಗತಿ ಬಂದು ಸ್ವ -ಸಹಾಯ ಸಂಘಗಳ ಒಕ್ಕೂಟ ಜಾಲ್ಸೂರು ವಲಯ ಮತ್ತು ಸರಕಾರಿ ಪ್ರೌಢಶಾಲೆ ದುಗ್ಗಲಡ್ಕ ಇವುಗಳ ಸಂಯುಕ್ತ ಆಶ್ರಯದಲ್ಲಿ ದುಗಲಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವು ನ.21ರಂದು ನಡೆಯಿತು.
ಶಾಲಾ ಮುಖ್ಯೋಪಾಧ್ಯಾಯ ಸುರೇಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಸುಳ್ಯ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಯತೀಶ್ ರೈ ದುಗ್ಗಲಡ್ಕ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ನಿವೃತ್ತ ಪೊಲೀಸ್ ಅಧಿಕಾರಿ ಜನಜಾಗೃತಿ ವಲಯಧ್ಯಕ್ಷ ಭಾಸ್ಕರ ಅಡ್ಕಾರು ಅವರು ವಿದ್ಯಾರ್ಥಿಗಳಿಗೆ ಸೂಕ್ತ ಮಾಹಿತಿ ಮತ್ತು ಮಾರ್ಗದರ್ಶನ ನೀಡಿದರು.
ಜಾಲ್ಸೂರು ವಲಯ ಮೇಲ್ವಿಚಾರಕ ತೀರ್ಥರಾಮರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ವಿದ್ಯಾರ್ಥಿಗಳಿಗೆ ಸ್ವಾಸ್ತ್ಯ ಸಂಕಲ್ಪ ಪ್ರತಿಜ್ಞಾ ವಿಧಿ ಭೋದಿಸಿದರು
ಮುಖ್ಯೋಪಾಧ್ಯಾಯ ಸುರೇಶ್ ಕುಮಾರ್ ಸ್ವಾಗತಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಭಜನಾ ಪರಿಷತ್ ವಲಯ ನಿರ್ದೇಶಕರಾದ ಪುರುಷೋತ್ತಮ ಆಚಾರ್ಯ, ಸೇವಾಪ್ರತಿನಿಧಿಗಳಾದ ಶ್ರೀಮತಿ ಸೌಮ್ಯ ಮತ್ತು ಶ್ರೀಮತಿ ಸಕಲ, ಸಹಶಿಕ್ಷಕರು ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.