ಇತಿಹಾಸ ಪ್ರಸಿದ್ಧ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಬಗ್ಗೆ ಪೂರ್ವಭಾವಿ ಸಭೆಯು ನ.26 ರಂದು ಆದಿತ್ಯವಾರ ಬೆಳಿಗ್ಗೆ ಗಂಟೆ 10.30ಕ್ಕೆ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.
ವರ್ಷಂಪ್ರತಿಯಂತೆ ಜನವರಿ 16 ರಿಂದ ಜಾತ್ರೋತ್ಸವ ಆರಂಭಗೊಳ್ಳಲಿದೆ.
ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹಾಗೂ ಕ್ಷೇತ್ರದ ತಂತ್ರಿಗಳಾದ ಕೆಮ್ಮಿಂಜೆ ನಾಗೇಶ ತಂತ್ರಿಗಳು ಹಾಗೂ ಮಹೇಶ ಮುನಿಯಂಗಳರವರ ಉಪಸ್ಥಿತಿ ಹಾಗೂ ಮಾರ್ಗದರ್ಶನದೊಂದಿಗೆ ಜಾತ್ರೋತ್ಸವದ ಸಂದರ್ಭದಲ್ಲೇ ಶ್ರೀ ದೇವಿಗೆ ನೂತನ ರಥ ಸಮರ್ಪಣೆಗೊಳ್ಳಲಿದೆ.
ಶ್ರೀ ದೇವಿಯ ಉತ್ಸವವನ್ನು ವಿಧಿವತ್ತಾಗಿ ಮತ್ತು ವಿಜೃಂಭಣೆಯಿಂದ ನಡೆಸುವ ನಿಟ್ಟಿನಲ್ಲಿ ತಮ್ಮೆಲ್ಲರ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಬೇಕೆಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ತಿಳಿಸಿದ್ದಾರೆ.