ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕುಮಾರಧಾರ ಸಭಾಂಗಣದಲ್ಲಿ ನ.23 ರಂದು ಮಹಿಳಾ ಗ್ರಾಮ ಮತ್ತು ಉದ್ಯೋಗ ಖಾತ್ರಿಯ ಗ್ರಾಮ ಸಭೆ ನಡೆಯಿತು.
ಸಭಾಧ್ಯಕ್ಷತೆಯನ್ನು ಸುಬ್ರಮಣ್ಯ ಗ್ರಾ. ಪಂ. ಅಧ್ಯಕ್ಷರಾದ ಶ್ರೀಮತಿ ಸುಜಾತ ಕೆ ವಹಿಸಿದ್ದರು. ಸುಬ್ರಹ್ಮಣ್ಯ ಆರಕ್ಷಕ ಠಾಣೆಯ ಸಿಬ್ಬಂದಿ ಶ್ರೀಮತಿ ಸಂಧ್ಯಾ ರವರು ಮಹಿಳಾ ನೈರ್ಮಲ್ಯ ,ಮಹಿಳಾಪರ ಕಾನೂನು, ಮತ್ತು ಕೌಟುಂಬಿಕ ದೌರ್ಜನ್ಯ ಕಾಯ್ದೆಗಳು, ಮಹಿಳೆಯರ ನ್ಯಾಯಪರ ಮಾಹಿತಿಗಳನ್ನು ವಿವರವಾಗಿ ನೀಡಿದರು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಭಾರತಿ ಅವರು ಮಹಿಳೆಯರ ಆರ್ಥಿಕ ಸುಧಾರಣೆ, ಸಾಮಾಜಿಕ ಬದ್ಧತೆ, ಶೈಕ್ಷಣಿಕ ಸಬಲೀಕರಣ, ಮಕ್ಕಳ ಪೋಷಣೆ ,ಮತ್ತು ರಕ್ಷಣೆ ಮಕ್ಕಳ ಆರೋಗ್ಯ ಸುಧಾರಣೆ, ನೈರ್ಮಲ್ಯ ಇತ್ಯಾದಿಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ಸಭೆಯಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿನ ಸದಸ್ಯರುಗಳು ಹಾಗೂ ಮಹಿಳಾ ಸದಸ್ಯರು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟವರು,ಶ ಸದಸ್ಯರುಗಳು ಸ್ವಸಹಾಯ ಸಂಘಗಳ ಸದಸ್ಯರುಗಳು, ಸಾರ್ವಜನಿಕರು ಭಾಗವಹಿಸಿದ್ದರು.
ವೇದಿಕೆಯಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಉಪಾಧ್ಯಕ್ಷ ವೆಂಕಟೇಶ ಎಚ್ ಎಲ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್, ಕಾರ್ಯದರ್ಶಿ ಮೋನಪ್ಪ ಡಿ ಮತ್ತಿತರರು ಉಪಸ್ಥಿತರಿದ್ದರು.