ಲೋಕಸಭಾ ಚುನಾವಣೆಗೆ ಸಿದ್ಧತೆ

0

ಸುಳ್ಯದಲ್ಲಿ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ

2024ರಲ್ಲಿ ನಡೆಯುವ ಲೋಕಸಭಾ ಚುನಾವಣೆಗೆ ಸಿದ್ಧತೆಗಳು ಆರಂಭಗೊಂಡಿದೆ. ಈ ಹಿನ್ನಲೆಯಲ್ಲಿ ವಲ್ನರೇಬಲ್ ಮತಗಟ್ಟೆಗಳನ್ನು ಗುರುತಿಸುವ ಬಗ್ಗೆ ಸೆಕ್ಟರ್ ಅಧಿಕಾರಿಗಳಿಗೆ ಮತ್ತು ಪೊಲೀಸ್ ಸೆಕ್ಟರ್ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ನ.24 ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಸುಳ್ಯ ನಗರ ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ ವಲ್ನರೇಬಲ್ ಮತಗಟ್ಟೆ ಗುರುತಿಸಲು ಸೆಕ್ಟರ್ ಅಧಿಕಾರಿ ಹಾಗೂ ಪೊಲೀಸ್ ಸೆಕ್ಟರ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಈ ಅಧಿಕಾರಿಗಳಿಗೆ ವಲ್ನರೇಬಲ್ ಮತಗಟ್ಟೆ ಗುರುತಿಸುವ ಬಗ್ಗೆ ತರಬೇತಿ ನೀಡಲಾಯಿತು.

ನಿಯೋಜನೆಗೊಂಡಿರುವ ಸೆಕ್ಟರ್ ಅಧಿಕಾರಿ ಹಾಗೂ ಪೊಲೀಸ್ ಸೆಕ್ಟರ್ ಅಧಿಕಾರಿಗಳು ಜಂಟಿಯಾಗಿ ಪ್ರತಿ ಮತಗಟ್ಟೆಗಳನ್ನು ಹಾಗೂ ಪ್ರತಿ ಮತಗಟ್ಟೆಗಳಿರುವ ಪ್ರದೇಶಗಳ ವ್ಯಾಪ್ತಿಯನ್ನು ಪರಿಶೀಲನೆ ನಡೆಸಿ ವಲ್ನರೇಬಲ್ ಮತಗಟ್ಟೆಗಳನ್ನು ಗುರುತಿಸಿ ವರದಿ ನೀಡುವಂತೆ ಸೂಚಿಸಲಾಯಿತು.


ಮಾಸ್ಟರ್ ತರಬೇತುದಾರ ಡಾ.ಸುಂದರ್ ಕೇನಾಜೆ ತರಬೇತಿ ನೀಡಿದರು. ಸುಳ್ಯ ತಹಶೀಲ್ದಾರ್ ಜಿ.ಮಂಜುನಾಥ್, ಉಪ ತಹಶೀಲ್ದಾರ್ ಚಂದ್ರಕಾಂತ್ ಎಂ.ಆರ್., ಪೊಲೀಸ್ ಉಪನಿರೀಕ್ಷಕಿ ಸರಸ್ವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಿಯೋಜನೆಗೊಂಡ ಸೆಕ್ಟರ್ ಅಧಿಕಾರಿಗಳು ಹಾಗೂ ಪೊಲೀಸ್ ಸೆಕ್ಟರ್ ಅಧಿಕಾರಿಗಳು ಭಾಗವಹಿಸಿದ್ದರು.