ಸಂಪಾಜೆ ಗ್ರಾ.ಪಂ. ಸಾಮಾನ್ಯ ಸಭೆ

0

ಮಾಜಿ ಗ್ರಾ.ಪಂ. ಸದಸ್ಯ ದಿ. ಷಣ್ಮುಗಂ ಅವರಿಗೆ ಶ್ರದ್ಧಾಂಜಲಿ ಸಲ್ಲಿಕೆ

ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಮತಿ ಶಕ್ತಿವೇಲು ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಸಭಾಭವನದಲ್ಲಿ ನಡೆಯಿತು.

ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರಿತಾ ಡಿಸೋಜಾ ಅವರು ಸ್ವಾಗತಿಸಿದರು.
ವರದಿ ಹಾಗೂ ಲೆಕ್ಕ ಪತ್ರವನ್ನು ಕಾರ್ಯದರ್ಶಿ ಶ್ರೀಮತಿ ಪದ್ಮಾವತಿ ಅವರು ಮಂಡಿಸಿದರು.
ಈ ಸಂದರ್ಭದಲ್ಲಿ ಇತ್ತೀಚಿಗೆ ನಿಧನರಾದ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಷಣ್ಮುಗಂ ಅವರಿಗೆ ಒಂದು ನಿಮಿಷದ ಮೌನ ಪ್ರಾರ್ಥನೆ ಮಾಡಿ ಶ್ರದ್ದಾಂಜಲಿ ಅರ್ಪಿಸಲಾಯಿತು.
ಸಭೆಯಲ್ಲಿ ಕುಡಿಯುವ ನೀರು, ಬೀದಿ ದೀಪಗಳ ಕೋಟೇಶನ್ ಅಪ್ರೋವ್, ಒಣ ಮತ್ತು ಹಸಿ ಕಸ ಬೆರ್ಪಡಿಸಿ ಕೊಡದಿದ್ದರೆ ಸ್ವೀಕರಿಸದಿರಲು ತೀರ್ಮಾನಿಸಲಾಯಿತು.

ಮನೆ ತೆರಿಗೆ ವಸೂಲಿ, ತೆರಿಗೆ ಬಗ್ಗೆ ಸರ್ವೆ ಕಾರ್ಯಕ್ರಮ ನಡೆಸುವುದು., ಸಾರ್ವಜನಿಕ ಅರ್ಜಿ ಪರಿಶೀಲನೆ ಮಾಡಲಾಯಿತು.

ಸಭೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಎಸ್. ಕೆ. ಹನೀಫ್ ಕಲ್ಲುಗುಂಡಿ, ಸದಸ್ಯರುಗಳಾದ ಸೋಮಶೇಖರ್ ಕೊಯಿಂಗಾಜೆ, ಜಿ. ಕೆ. ಹಮೀದ್ ಗೂನಡ್ಕ, ಜಗದೀಶ್ ರೈ ಸಂಪಾಜೆ, ಶ್ರೀಮತಿ ಸುಂದರಿ ಮುಂಡಡ್ಕ, ಪಿ.ಕೆ. ಅಬೂಸಾಲಿ ಗೂನಡ್ಕ , ಶ್ರೀಮತಿ ವಿಮಲಾ ಪ್ರಸಾದ್, ಶೌವಾದ್ ಗೂನಡ್ಕ, ಶ್ರೀಮತಿ ರಜನಿ ಶರತ್, ಶ್ರೀಮತಿ ಅನುಪಮಾ, ಶ್ರೀಮತಿ ಲಿಸ್ಸಿ ಮೊನಾಲಿಸಾ, ಶ್ರೀಮತಿ ಸುಶೀಲ ವಿಜಯ ಕುಮಾರ್ ಉಪಸ್ಥಿತರಿದ್ದರು. ಗ್ರಾಮ ಪಂಚಾಯತಿ ಸಿಬ್ಬಂದಿಗಳು ಸಹಕರಿಸಿದರು.