ಸುಳ್ಯದಲ್ಲಿ ಹಣ್ಣು ಮತ್ತು ತರಕಾರಿ ಸಂಸ್ಕರಣೆ ತರಬೇತಿ

0

ತೊಟಗಾರಿಕೆ ಇಲಾಖೆ, ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ, ಮಾನಸ ಮಹಿಳಾ ಮಂಡಲ ಜಟ್ಟಿಪಳ್ಳ ಮತ್ತು ಲಯನ್ಸ್ ಕ್ಲಬ್ ಸುಳ್ಯ ಇವರ ಸಹಯೋಗದಲ್ಲಿ ಹಣ್ಣು ಮತ್ತು ತರಕಾರಿ ಸಂಸ್ಕರಣೆ ತರಬೇತಿ ಕಾರ್ಯಕ್ರಮ ನ.೨೩ ರಂದು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಮಧುಮತಿ ರಾಧಾಕೃಷ್ಣ ಬೊಳ್ಳೂರು ವಹಿಸಿದ್ದರು. ಲಯನ್ಸ್ ಕ್ಲಬ್ ಸುಳ್ಯ ಹಾಗೂ ಸುಳ್ಯ ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷ ವೀರಪ್ಪ ಗೌಡ ಕಣ್ಕಲ್ ಕಾರ್ಯಕ್ರಮ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಲಯನ್ಸ್ ಜಿಲ್ಲೆ ೩೧೭ ಡಿ ಪ್ರಾಂತ್ಯ ೭ ರ ಪ್ರಾಂತೀಯ ಅಧ್ಯಕ್ಷೆ ರೇಣುಕಾ ಸದಾನಂದ ಜಾಕೆ, ಮಾನಸ ಮಹಿಳಾ ಮಂಡಲ ಅಧ್ಯಕ್ಷೆ ಚಿತ್ರಲೇಖಾ ಮಡಪ್ಪಾಡಿ ಭಾಗವಹಿಸಿದ್ದರು.

ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರಾದ ಸುಹಾನ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.
ಒಕ್ಕೂಟದ ಉಪಾಧ್ಯಕ್ಷೆ ಪುಷ್ಪಾ ಡಿ. ಪ್ರಸಾದ್ ವಂದಿಸಿದರು. ಒಕ್ಕೂಟದ ಕೋಶಾಧಿಕಾರಿ ಚಂದ್ರಾಕ್ಷಿ ಜೆ. ರೈ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಅನಿತಾ ಸುತ್ತುಕೋಟೆ ಸಹಕರಿಸಿದರು.

ತರಬೇತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಕೃಷಿ ವಿಜ್ಞಾನ ಕೇಂದ್ರ ಕಾಸರಗೋಡು ಇಲ್ಲಿಯ ಲಕ್ಷ್ಮಿಭಟ್ ಭಾಗವಹಿಸಿ ರೈತರು ಬೆಳೆಯುವ ಹಣ್ಣುಗಳಿಗೆ ಮೌಲ್ಯವರ್ಧನಗೊಳಿಸುವ ಮತ್ತು ಸಂಸ್ಕರಿಸುವ ಬಗ್ಗೆ ಮಾಹಿತಿ ನೀಡಿದರು.

ತೋಟಗಾರಿಕಾ ಇಲಾಖಾ ಅಧಿಕಾರಿಗಳಾದ ಅರಬಣ್ಣ ಪೂಜೇರಿ, ಜಗದೀಶ್, ವಿಜೇತ್, ಹಾಗೂ ಲಯನ್ಸ್ ಕಾರ್ಯದರ್ಶಿ ದೊಡ್ಡಣ್ಣ ಬರೆಮೇಲು, ಒಕ್ಕೂಟದ ಮಾಜಿ ಅಧ್ಯಕ್ಷರುಗಳಾದ ಹರಿಣಿ ಸದಾಶಿವ, ಮಹಾಲಕ್ಷ್ಮಿ ಕೊರಂಬಡ್ಕ ಉಪಸ್ಥಿತರಿದ್ದರು.