ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಷಣ್ಮುಖದೇವ ವರ್ತುಲ ಕಾರ್ಯಾಗಾರ

0


ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಆಶ್ರಯದಲ್ಲಿ ಷಣ್ಮುಖದೇವ ವರ್ತುಲ ಕಾರ್ಯಗಾರವನ್ನು ನ.25ರಂದು ನಡೆಸಲಾಯಿತು.

ಷಣ್ಮುಖದೇವ ‌ವರ್ತುಲ ಕಾರ್ಯಗಾರವನ್ನು ವಿವೇಕಾನಂದ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಶ್ಯಾಮ್ ಪ್ರಸಾದ್ ಅಡ್ಡಂತಡ್ಕ ಅವರು ಉದ್ಘಾಟಿಸಿ, ಶುಭಹಾರೈಸಿದರು.

ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಬೇಕಾದರೆ ಶಿಕ್ಷರಿಗೆ ಶೈಕ್ಷಣಿಕ ಕಾರ್ಯಗಾರಗಳು ಅಗತ್ಯವಿದೆ ಎಂದು ನುಡಿದರು . ಷಣ್ಮುಖದೇವ ವರ್ತುಲದ ಕಾರ್ಯಗಾರದ ಸಂಯೋಜಕರಾದ ಚಂದ್ರಶೇಖರ ಸುಳ್ಯಪದವು ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಪುತ್ತೂರಿನ ತೆಂಕಿಲ ವಿವೇಕಾನಂದ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ನಳಿನಿ ವಾಗ್ಲೆ , ಪೆರ್ಲಂಪಾಡಿ ಷಣ್ಮುಖ ದೇವ ಪ್ರೌಢಶಾಲೆಯ ಸಹ ಶಿಕ್ಷಕ ನಂಜಪ್ಪ , ವಿನೋಬನಗರ ವಿವೇಕಾನಂದ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಗಿರೀಶ್ ಕುಮಾರ್ ಉಪಸ್ಥಿತರಿದ್ದರು.

ಕಾರ್ಯಾಗಾರದಲ್ಲಿ ಬಂಟ್ವಾಳದ ಬೊಳಂತಿಮೊಗರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಅಧ್ಯಾಪಕ ವಿಠಲನಾಯಕ್ ಕಲ್ಲಡ್ಕ ಅವರು “ಶಿಕ್ಷಕರ ಬೆಲೆ ಮತ್ತು ನೆಲೆ” ಎಂಬ ವಿಷಯದ ಬಗ್ಗೆ ಕಾರ್ಯಗಾರವನ್ನು ನಡೆಸಿಕೊಟ್ಟರು. ಬಳಿಕ ಆಲಂಕಾರು ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯ ಸತೀಶ್ ಕುಮಾರ್ ಜಿ .ಆರ್. ಅವರು ಇಂಗ್ಲೀಷ್ ಸಂವಹನದ ಬಗ್ಗೆ ತರಗತಿಯನ್ನು ನೀಡಿದರು. ಕಾರ್ಯಗಾರದಲ್ಲಿ 65 ಶಿಕ್ಷಕ- ಶಿಕ್ಷಕಿಯರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಜಯಪ್ರಸಾದ್ ಕಾರಿಂಜ ಸ್ವಾಗತಿಸಿ ಸಹಶಿಕ್ಷಕ ಶಶಿಧರ್ ವಂದಿಸಿದರು.