ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮ 2023 ಕಾರ್ಯಕ್ರಮ ನ.21 ರಂದು ನಡೆಯಿತು.
ಗ್ರಾಮ ಪಂಚಾಯತ್ ಗುತ್ತಿಗಾರು, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಗುತ್ತಿಗಾರು, ಮಂಗಳ ಕಲಾ ಸಾಹಿತ್ಯ ವೇದಿಕೆ ಪಟ್ಟೆ ಬಡಗನ್ನೂರು , ಯಶಸ್ವಿ ನಾಗರಿಕ ಸೇವಾ ಸಂಘ ವಾಸುದೇವ ನಗರ ಕಾರ್ಕಳ ಇದರ ಸಂಯುಕ್ತ ಆಶ್ರಯದಲ್ಲಿ ನಡೆದಿದ್ದು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಮಿತ್ರ ಮೂಕಮಲೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ವಿಶೇಷ ಆಹ್ವಾನಿತರಾದ ಸರಕಾರಿ ಪ್ರೌಢ ಶಾಲೆ ಮುಖ್ಯ ಶಿಕ್ಷಕರಾದ ನೆಲ್ಸನ್ ಕ್ಯಾಸ್ಟ್ ಲಿನೋ ಗ್ರಂಥಾಲಯ ಮಹತ್ವದ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು. ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಗ್ರಂಥಾಲಯ ಸಪ್ತಾಹದ ಅಂಗವಾಗಿ ನಡೆಸಿದ ನನ್ನ ಮೆಚ್ಚಿನ ನೀತಿ ಕಥೆ ರಚನೆ ಮತ್ತು ಪ್ರಸ್ತುತ ಇರುವ ನನ್ನ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮುಂದೇನಾಗಬೇಕು ವಿಷಯದ ಬಗ್ಗೆ ಬರೆದ ಪ್ರಬಂಧ ಸ್ಪರ್ಧೆಗೆ ಬಹುಮಾನ ನೀಡಿ ಅಭಿನಂದಿಸಲಾಯಿತು. ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರಾದ ಶ್ರೀಮತಿ ಮಂಜುಳಾ ಮುತ್ಲಾಜೆ , ಪಿ ಡಿ ಓ ಧನಪತಿ, ಕಾರ್ಯಕ್ರಮ ಆಯೋಜಕರು ಮುರಳೀಧರ ಸಿ ಎಚ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀಮತಿ ಪ್ರಫುಲ್ಲಾ ದೇವಚಳ್ಳ ಮತ್ತು ಶ್ರೀಮತಿ ಸಾವಿತ್ರಿ ಮಂಡೆಕೋಲು ಮೇಲ್ವಿಚಾರಕರು ಭಾಗವಹಿಸಿದ್ದರು. ಪಂಚಾಯತ್ ವ್ಯಾಪ್ತಿಯ ಹಿರಿಯ ಗ್ರಂಥಾಲಯ ಸದಸ್ಯರಾದ ಡಿ ಆರ್ ಉದಯಕುಮಾರ್ 30ಕ್ಕೂ ಅಧಿಕ ಕೃಷಿ ಪತ್ರಿಕೆಯನ್ನು ಪುಸ್ತಕ ಜೋಳಿಗೆ ಕಾರ್ಯಕ್ರಮ ಅಡಿಯಲ್ಲಿ ಕೊಡುಗೆಯಾಗಿ ನೀಡಿದರು. ಗ್ರಂಥಾಲಯ ಸಲಹಾ ಸಮಿತಿ ಸದಸ್ಯರಾದ ಶ್ರೀಮತಿ ಮಿತ್ರಕುಮಾರಿ ಚಿಕ್ಮುಳಿ ಎಂಬಿಕೆ ,ಎಲ್ ಸಿ ಆರ್ ಪಿ ,ಪಶು ಸಖಿ , ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ, ಆಶಾ ಕಾರ್ಯಕರ್ತೆ ,ಶಿಕ್ಷಕರು ಪೋಷಕರು ವಿದ್ಯಾರ್ಥಿಗಳು ಪಂಚಾಯತ್ ಸಿಬ್ಬಂದಿ ವರ್ಗ ಪಾಲ್ಗೊಂಡು ಯಶಸ್ವಿಗೆ ಸಹಕರಿಸಿದರು . ಎಲ್ ಸಿ ಆರ್ ಪಿ ದಿವ್ಯ ಚತ್ರಪಾಡಿ ಪ್ರಾರ್ಥಿಸಿದರು. ಪಿಡಿಒ ಪ್ರಾಸ್ತಾವಿಕ ಮಾತುಗಳಿಂದ ಸ್ವಾಗತಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಅಭಿಲಾಷ ಮೋಟ್ನೂರು ವರದಿ ವಾಚಿಸಿದರು.