ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಮಹಾಸಭೆ- ಕೆ.ಟಿ.ವಿಶ್ವನಾಥರಿಗೆ ಸನ್ಮಾನ

0

ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ ನ.23ರಂದು ಜರುಗಿತು. ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಿಥಾಲಿ.ಪಿ.ರೈ ಶಿಕ್ಷಕ-ರಕ್ಷಕ ಸಂಘದ ಪಾತ್ರ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಬೆಳವಣಿಗೆಯಲ್ಲಿ ಹೆತ್ತವರ,ಪೋಷಕರ ಪಾತ್ರದ ಬಗ್ಗೆ ಮಾತನಾಡಿದರು.
ಅತಿಥಿಗಳಾಗಿ ಎನ್ನೆಂಸಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ.ಟಿ.ವಿಶ್ವನಾಥ ಭಾಗವಹಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಇವರನ್ನು ಸನ್ಮಾನಿಸಲಾಯಿತು. ಸಭೆಯಲ್ಲಿ ಪ್ರಸ್ತುತ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಚಿನ್ನಪ್ಪ.ಕೆ.ಕೆ ಮಾತನಾಡಿದರು.ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪ್ರಾಂಶುಪಾಲರಾದ ಪ್ರೊ.ರುದ್ರಕುಮಾರ್.ಎಂ.ಎಂ.ವಹಿಸಿದ್ದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಾಪಾಲನಾಧಿಕಾರಿ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ರತ್ನಾವತಿ ಡಿ ಮತ್ತು ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿಕೋಶದ ಸಂಯೋಜಕರಾದ ಡಾ.ಮಮತ.ಕೆ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಮಾಜ ಶಾಸ್ತ ವಿಭಾಗದ ಉಪನ್ಯಾಸಕರಾದ ಶ್ರೀಮತಿ ಚಿತ್ರಾಲೇಖ ಇವರು ಮುಖ್ಯ ಅತಿಥಿಗಳ ಕಿರುಪರಿಚಯ ಮಾಡಿದರು‌. ಇದೆ ಸಭೆಯಲ್ಲಿ ೨೦೨೩-೨೪ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಮತ್ತು ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪನ್ಯಾಸಕರಾದ ವಿಷ್ಣುಪ್ರಶಾಂತ್.ಬಿ ಹಾಗೂ ಹರಿಪ್ರಸಾದ್ ಎ.ವಿ. ಉಪಸ್ಥಿತರಿದ್ದರು.
ಶಿಕ್ಷಕ-ರಕ್ಷಕ ಸಂಘದ ಕಾರ್ಯದರ್ಶಿ ಮತ್ತು ಇತಿಹಾಸ ವಿಭಾಗದ ಮುಖ್ಯಸ್ಥರಾದ ತಿಪ್ಪೇಸ್ವಾಮಿ.ಡಿ.ಹೆಚ್. ಸ್ವಾಗತಿಸಿದರು. ಉಪನ್ಯಾಸಕ ಕುಲದೀಪ್ ಪಿ.ಪಿ‌. ವಂದಿಸಿದರು. ಕುಮಾರಿ. ಗಾನ ಬಿ.ಡಿ ಕಾರ‍್ಯಕ್ರಮದ ನಿರೂಪಿಸಿದರು.