ರಾಷ್ಟ್ರೀಯ ಏಕತಾ ಸಪ್ತಾಹದ ಅಂಗವಾಗಿ ಎನ್ನೆಂಸಿಯಲ್ಲಿ ಮಹಿಳಾ ಏಕತಾ ದಿನವನ್ನು ನ.೨೪ ರಂದು ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿಕೋಶದ ನೇತೃತ್ವದಲ್ಲಿ ಏರ್ಪಡಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರುದ್ರ ಕುಮಾರ್ ಎಂ.ಎಂ. ವಹಿಸಿದ್ದರು. ಸುಳ್ಯದ ಸಾಂದೀಪ್ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹರಣಿ ಸದಾಶಿವ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ಸ್ಥಾನಮಾನ ಹಾಗೂ ಲಿಂಗ ಅಸಮಾನತೆಯನ್ನು ಹೋಗಲಾಡಿಸಲು ತಾವು ತೆಗೆದುಕೊಳ್ಳಬೇಕಾಗಿರುವ ದಿಟ್ಟ ಹೆಜ್ಜೆಯ ಕುರಿತಾಗಿ ಜಾಗೃತಿಯನ್ನು ಮೂಡಿಸಿದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಶ್ರೀಮತಿ ರತ್ನಾವತಿ ಡಿ. ಸ್ವಾಗತಿಸಿ, ಆಂತರಿಕ ಗುಣಮಟ್ಟ ಖಾತರಿಕೋಶದ ಸಂಯೋಜಕಿ ಡಾ.ಮಮತಾ ಕೆ. ವಂದಿಸಿದರು. ಸಮಾಜ ಕಾರ್ಯ ವಿಭಾಗದ ಉಪನ್ಯಾಸಕಿ ಶ್ರೀಮತಿ ಶೋಭಾ ಎ. ಅತಿಥಿ ಪರಿಚಯ ಮಾಡಿಕೊಟ್ಟರು. ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಕೃಪಾ ಎ.ಎನ್. ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.