ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ, ಸುಳ್ಯ ವಕೀಲರ ಸಂಘ ಇದರ ಆಶ್ರಯದಲ್ಲಿ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಇಂದು ನಡೆಯಿತು.
ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಸುಳ್ಯ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ಬಿ.ಮೋಹನ್ ಬಾಬು ಕಾರ್ಯಕ್ರಮವನ್ನು ಉದ್ಘಾಟಿಸಿ ಸಂವಿಧಾನ ಪೀಠಿಕೆಯನ್ನು ಬೋಧಿಸಿ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಗೋಪಿನಾಥ್ ಮೆತ್ತಡ್ಕ ವಹಿಸಿದ್ದರು.
ಸುಳ್ಯ ನ್ಯಾಯಾಲಯದ ವಕೀಲರಾದ ಪ್ರದೀಪ್ ಬೊಳ್ಳೂರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಂವಿಧಾನ ದಿನದ ಕುರಿತ ಮಾಹಿತಿಯನ್ನು ನೀಡಿದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಸುಳ್ಯ ವಕೀಲರ ಸಂಘದ ಅಧ್ಯಕ್ಷ ಕೆ ನಾರಾಯಣ್, ನ್ಯಾಯಾಲಯದ ಸಹಾಯಕ ಸರ್ಕಾರಿ ಅಭಿಯೋಜಕರಾದ ರಮೇಶ್ ಆರ್, ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ಕಲ್ತಡ್ಕ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಶ್ರೀಮತಿ ಲೀಲಾ ಮನಮೋಹನ್, ರಾಹುಲ್ ಅಡ್ಪಂಗಾಯ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಜಯರಾಮ ಬಿ ಎಸ್, ವಕೀಲರ ಸಂಘದ ಕೋಶಾಧಿಕಾರಿ ಜಗದೀಶ್ ಡಿಪಿ ಉಪಸ್ಥಿತರಿದ್ದರು.