ಪಂಜ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಮತ್ತು ಮಕ್ಕಳ ಹುಟ್ಟುಹಬ್ಬ ಕಾರ್ಯಕ್ರಮ ನಡೆಯಿತು.
ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ರವೀಶ್ರೀಯವರು ಕಾರ್ಯಕ್ರಮ ಉದ್ಘಾಟಿಸಿದರು. ವನಿತಾ ಸಮಾಜದ ಅಧ್ಯಕ್ಷೆ ಶ್ರೀಮತಿ ಮಾಲಿನಿ ಕುದ್ವರವರು ಸಭಾಧ್ಯಕ್ಷತೆ ವಹಿಸಿ ಮಕ್ಕಳಿಗೆ ಪುಸ್ತಕ, ಪೆನ್ಸಿಲ್ ಗಳನ್ನು ಕೊಡುಗೆಯಾಗಿ ನೀಡಿದರು. ಗೌರವಾಧ್ಯಕ್ಷೆ ಶ್ರೀಮತಿ ಪುಷ್ಪಾ ಡಿ ಪ್ರಸಾದ್, ಬಾಲವಿಕಾಸ ಸಮಿತಿ ಸದಸ್ಯೆ ಶ್ರೀಮತಿ ಹೇಮಲತಾ ಜನಾರ್ಧನ್ ಹಾಗೂ ನಿವೃತ್ತ ಮುಖ್ಯ ಶಿಕ್ಷಕಿ ರುಕ್ಮಿಣಿ ಮಹಾಬಲ ಕುಳ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಭಾಗೀರಥಿ ಕರಿಕಳ ಸ್ವಾಗತಿಸಿದರು ಮತ್ತು ವಂದಿಸಿದರು.