ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ ಮತ್ತು ತಾಲೂಕು ಜನಜಾಗೃತಿ ವೇದಿಕೆಯ ವತಿಯಿಂದ ಅಜ್ಜಾವರ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಗುರುಸ್ವಾಮಿ ಶಿವಪ್ರಕಾಶ್ ಅಡ್ಪಂಗಾಯ ಅಧ್ಯಕ್ಷತೆ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿ ಜನಜಾಗೃತಿ ವೇದಿಕೆ ನಿಕಟ ಪೂರ್ವ ಅಧ್ಯಕ್ಷ ಮಹೇಶ್ ಕುಮಾರ್ ರೈ ಮೇನಾಲ ರವರು ಮಾದಕ ವ್ಯಸನದಿಂದಾಗುವ ದುಷ್ಪರಿಣಾಮದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ಮಾರ್ಗದರ್ಶನ ನೀಡಿದರು.
ಮುಖ್ಯ ಅತಿಥಿಗಳಾಗಿ ಚೈತ್ರ ಯುವತಿ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಶಶ್ಮಿ ಭಟ್, ನಿಕಟ ಪೂರ್ವ ಅಧ್ಯಕ್ಷೆ ಶ್ರೀಮತಿ ಲೀಲಾವತಿ, ಸೇವಾ ಪ್ರತಿನಿಧಿ ವೇದಾವತಿ, ರಜನಿ, ಶ್ರುತಿ, ಸೌಮ್ಯ ಹಾಗೂ ಶಾಲಾ ಶಿಕ್ಷಕ ವೃಂದದವರು ಮತ್ತು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಅಜ್ಜಾವರ ವಲಯ ಮೇಲ್ಚಿಚಾರಕಿ ವಿಶಾಲ ಕೆ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಗೋಪಿನಾಥ್ ವಂದಿಸಿದರು.