ಡಿ. 2 : ವಿನೋಬಾನಗರದ ವಿವೇಕಾನಂದ ಶಾಲಾ ವಾರ್ಷಿಕೋತ್ಸವ

0


ವಿನೋಬಾನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೋತ್ಥಾನ ಶಿಶು ಮಂದಿರ, ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಶಾಲಾ ವಾರ್ಷಿಕೋತ್ಸವವು ಡಿ. 2ರಂದು ನಡೆಯಲಿದೆ. ಪೂರ್ವಾಹ್ನ 9.3೦ಕ್ಕೆ ಜಾಲ್ಸೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಮರಸಂಕ ಧ್ವಜಾರೋಹಣ ಮಾಡಲಿದ್ದಾರೆ.

ಬಳಿಕ ಸರಸ್ವತಿ ವಂದನೆ ನಡೆಯಲಿದೆ. ನಂತರ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕಿ ಕು. ಭಾಗೀರಥಿ ಮುರುಳ್ಯ ವಹಿಸಲಿದ್ದು, ಮುಖ್ಯ ಅಭ್ಯಾಗತರಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಈ., ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿ ಅಚ್ಯುತ ನಾಯಕ್, ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣಕುಮಾರ್ ಭಾಗವಹಿಸಲಿದ್ದಾರೆ. ವಿದ್ಯಾಸಂಸ್ಥೆಯ ಗೌರವ ಸಲಹೆಗಾರ ನ.ಸೀತಾರಾಮ, ಆಡಳಿತ ಮಂಡಳಿ ಅಧ್ಯಕ್ಷ ಶ್ಯಾಂಪ್ರಸಾದ್ ಅಡ್ಡಂತಡ್ಕ, ಗ್ರಾ.ಪಂ. ಸದಸ್ಯೆ ಶ್ರೀಮತಿ ಲೀಲಾವತಿ, ಶಾಲಾ ಸಂಚಾಲಕ ಸುಧಾಕರ ಕಾಮತ್ ಗೌರವ ಉಪಸ್ಥಿತರಿರಲಿದ್ದಾರೆ.


ಬೆಳಿಗ್ಗೆ ೧೦.೩೦ರಿಂದ ರಾತ್ರಿ ೯ರ ತನಕ ಶಾಲಾ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ವಿಶೇಷ ಕಾರ್ಯಕ್ರಮವಾಗಿ ತರಣಿಸೇನಾ ಕಾಳಗ ಯಕ್ಷಗಾನ, ಚಂದ್ರಹಾಸ ನಾಟಕ, ಬಾಲ ಶ್ರೀರಾಮ ದರ್ಶನ ರೂಪಕ ನಡೆಯಲಿದೆ.