ಉದ್ದಂತಡ್ಕ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

0

ಅಜ್ಜಾವರ ಗ್ರಾಮದ ಉದ್ದಂತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಇತ್ತೀಚೆಗೆ ಆಚರಿಸಲಾಯಿತು.
ಕಾರ್ಯಕ್ರಮವನ್ನು ಅಂಗನವಾಡಿ ಪುಟಾಣಿಗಳು ದೀಪ ಬೆಳಗಿಸಿ ಉದ್ಘಾಟಿಸಿದರು. ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಸ್ತ್ರೀ ಶಕ್ತಿ ಸದಸ್ಯರಿಗೆ ಹಾಗೂ ಮಕ್ಕಳ ಪೋಷಕರಿಗೂ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.

ಅಲ್ಲದೇ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಶಿವಣ್ಣ ಗೌಡ ಕೆದ್ಕಾರ್, ಜನಾರ್ಧನ ಗೌಡ ಕೆದ್ಕಾರ್, ಜಾನಕಿ ಆಲಂಕಳ್ಯ ಬಹುಮಾನ ಪ್ರಾಯೋಜಕರಾಗಿ ಸಹಕರಿಸಿದರು. ಅಂಗನವಾಡಿ ಕಾರ್ಯಕರ್ತೆ ಧನ್ಯಕುಮಾರಿ ಕಾರ್ಯಕ್ರಮ ನಿರೂಪಿಸಿದರು. ಸಹಾಯಕಿ ದೇವಮ್ಮ ಸಹಕರಿಸಿದರು.