ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿಯಾಗಿ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಈ. ಅವರು ನ.29ರಂದು ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ದೇವಳದ ಕಛೇರಿ ವ್ಯವಸ್ಥಾಪಕ ಆನಂದ ಕಲ್ಲಗದ್ದೆ ಹಾಗೂ ದೇವಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.