ಜಾಲ್ಸೂರು ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಮತ್ತು ಮಕ್ಕಳ ಗ್ರಾಮಸಭೆಯು ನ.29ರಂದು ಗ್ರಾಮ ಪಂಚಾಯತಿ ಸಭಾಭವನದಲ್ಲಿ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಮರಸಂಕ ಅವರು ದೀಪ ಬೆಳಗಿಸಿ ಗ್ರಂಥಾಲಯ ಸಪ್ತಾಹವನ್ನು ಉದ್ಘಾಟಿಸಿದರು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಬ್ಬಯ್ಯ ಅವರು ಸ್ವಾಗತಿಸಿದರು
ಗ್ರಂಥಾಲಯದ ವರದಿಯನ್ನು ಗ್ರಂಥಾಲಯದ ಮೇಲ್ವಿಚಾರಕಿ ಶ್ರೀಮತಿ ಸುಚಿತ್ರ ಅವರು ವಾಚಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಅರ್ಭಡ್ಕ, ಗ್ರಾಮ ಪಂಚಾಯತಿ ಸದಸ್ಯರುಗಳು, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಪೊಲೀಸ್ ಇಲಾಖೆ, ಸಿಬ್ಬಂದಿಗಳು, ಶಿಕ್ಷಣ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು,ಗ್ರಾಮ ಕರಣೀಕರು, ಆಶಾ ಕಾರ್ಯಕರ್ತೆಯರು ,ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು, ಶಾಲಾ ಎಸ್. ಡಿ. ಎಂ. ಸಿ. ಅಧ್ಯಕ್ಷರು ಉಪಸ್ಥಿತರಿದ್ದರು.
ಗುತ್ತಿಗಾರು ಗ್ರಂಥಾಲಯದ ಮೇಲ್ವಿಚಾರಕ ಅಭಿಲಾಷ್ ಅವರು ಗ್ರಂಥಾಲಯದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.
ಗ್ರಾಮ ಪಂಚಾಯತ್ ಹಾಗೂ ಗ್ರಂಥಾಲಯದ ವತಿಯಿಂದ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ, ಪ್ರಥಮ ಮತ್ತು ದ್ವಿತೀಯ ಬಹುಮಾನವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಪಂಚಾಯತ್ ಕಾರ್ಯದರ್ಶಿ ಸುಂದರ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಯಶಸ್ವಿ ನಾಯಕರಿಕ ಸೇವಾ ಸಂಘ ವಾಸು ದೇವ ನಗರ ಕಾರ್ಕಳ ಇದರ ಸಂಚಾಲಕ ಮುರಳೀಧರ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಸುಮಾರು 78 ಮಂದಿ ವಿದ್ಯಾರ್ಥಿಗಳು .