ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರುಮದ್ಯಪಾನಗೈದು ರಾಜ್ಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ ಅವರನ್ನು ಅಮಾನತುಗೊಳಿಸಿ ಇಲಾಖೆಆದೇಶ ಮಾಡಿರುವುದಾಗಿ ತಿಳಿದುಬಂದಿದೆ.
ನ.28 ರಂದು ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮ ಫಲಕವಿರುವ ಬೊಲೇರೋ ವಾಹನವನ್ನು ಚಲಾಯಿಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದರು.ಈ ಸಂದರ್ಭದಲ್ಲಿ ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯ ಪರಿಚಯ ಕೇಳಿದಾಗ ಆ ವ್ಯಕ್ತಿಯು ತಾನು ಸುಳ್ಯ ಎ.ಪಿ.ಎಂ.ಸಿ. ಕಾರ್ಯದರ್ಶಿ, ನನ್ನದು ತಪ್ಪಾಯಿತೆಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಪ್ರಕರಣ ಕ್ಕೆ ಸಂಬಂಧಿಸಿ ನ.29ರಂದು ಎ.ಪಿ.ಎಂ.ಸಿ. ಕಾರ್ಯದರ್ಶಿ ಯವರನ್ನು ಅಮಾನತು ಗೊಳಿಸಿ ಆದೇಶ ಮಾಡಲಾಗಿದೆ.ಸುಳ್ಯಕ್ಕೆ ಬೆಳ್ತಂಗಡಿ ಎ.ಪಿ.ಎಂ.ಸಿ. ಕಾರ್ಯದರ್ಶಿ ಯಾಗಿರುವ ರವೀಂದ್ರ ರಿಗೆ ಪ್ರಭಾರ ವಹಿಸಲಾಗಿದೆ ಎಂದು ತಿಳಿದುಬಂದಿದೆ