ಅರಂತೋಡು: ಸ.ಹಿ.ಪ್ರಾ.ಶಾಲಾ ವಾರ್ಷಿಕೋತ್ಸವ – ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ – ವಿವಿಧ ಸವಲತ್ತುಗಳ ಉದ್ಘಾಟನೆ

0

ಶಾಲಾ ನಿವೃತ್ತ ಶಿಕ್ಷಕಿ ಶ್ರೀಮತಿ ಉಮಾವತಿ ಅವರಿಗೆ ಬೀಳ್ಕೊಡುಗೆ

ಶಾಸಕಿ ಭಾಗೀರಥಿ ಸೇರಿದಂತೆ ದಾನಿಗಳಿಗೆ ಸನ್ಮಾನ – ಗೌರವಾರ್ಪಣೆ

ಅರಂತೋಡು ಸ.ಹಿ‌.ಪ್ರಾ.ಶಾಲೆ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಸಂಯುಕ್ತ ಆಶ್ರಯದಲ್ಲಿ ಶಾಲಾ ವಾರ್ಷಿಕೋತ್ಸವ , ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ , ದಾನಿಗಳಿಂದ ನೀಡಲ್ಪಟ್ಟ ವಿವಿಧ ಸವಲತ್ತುಗಳ ಉದ್ಘಾಟನೆ ಹಾಗೂ ನಿವೃತ್ತ ಶಿಕ್ಷಕಿ ಶ್ರೀಮತಿ ಉಮಾವತಿ ಪಿ. ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ದಿ. ಯು.ಡಿ‌ ಶೇಖರ್ ಸಭಾ ವೇದಿಕೆಯಲ್ಲಿ ನ.30ರಂದು ನಡೆಯಿತು.ಕಾರ್ಯಕ್ರಮವನ್ನು ಶಾಸಕಿ ಭಾಗೀರಥಿ ಮುರುಳ್ಯ ಅವರು ದೀಪಬೆಳಗಿಸಿ, ಉದ್ಘಾಟಿಸಿ, ಶುಭಹಾರೈಸಿದರು. ಅರಂತೋಡು ಗ್ರಾ.ಪಂ. ಅಧ್ಯಕ್ಷ ಕೇಶವ ಅಡ್ತಲೆ ಅವರು ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ದಿ. ಯು.ಡಿ. ಶೇಖರ್ ಸ್ಮರಣಾರ್ಥ ಅವರ ಪತ್ನಿ ಶ್ರೀಮತಿ ಗೀತಾ ಶೇಖರ್ ಅವರು ಶಾಲೆಗೆ ಕೊಡುಗೆಯಾಗಿ ನೀಡಿದ ನೂತನ ಸಭಾವೇದಿಕೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು.ನಿವೃತ್ತ ಶಿಕ್ಷಕಿ ಶ್ರೀಮತಿ ಉಮಾವತಿ ಅವರನ್ನು ನಿವೃತ್ತ ಶಿಕ್ಷಕ ಕೆ.ಆರ್. ಗಂಗಾಧರ ಅವರು ಸನ್ಮಾನಿಸಿ, ಗೌರವಿಸಿ, ಶುಭಹಾರೈಸಿದರು. ದಿ.‌ಅಡ್ಕಬಳೆ ದೇವಪ್ಪ ಗೌಡರ ಸ್ಮರಣಾರ್ಥ ಅವರ ಮಕ್ಕಳು ಶಾಲೆಗೆ ಕೊಡುಗೆಯಾಗಿ ನೀಡಿದ ಸಿ.ಸಿ.ಟಿ.ವಿ.ಯನ್ನು ಅರಂತೋಡು – ತೊಡಿಕಾನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಅವರು ಉದ್ಘಾಟಿಸಿ, ಶುಭಹಾರೈಸಿದರು.ನಿವೃತ್ತ ಮುಖ್ಯೋಪಾಧ್ಯಾಯ ಪುರುಷೋತ್ತಮ ಕಿರ್ಲಾಯ ಅವರು ಪ್ರಧಾನ ಭಾಷಣ ಮಾಡಿದರು.ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಭವಾನಿ ಸಿ‌.ಎ., ಗ್ರಾ.ಪಂ. ಸದಸ್ಯ ಶಿವಾನಂದ ಕುಕ್ಕುಂಬಳ, ಕು. ಶ್ವೇತ ಅರಮನೆಗಯ, ಶ್ರೀಮತಿ ಮಾಲಿನಿ ವಿನೋದ್, ಪುಷ್ಪಾಧರ ಕೊಡೆಂಕಿರಿ, ಸರ್ಕಾರಿ ಸಂಘದ ಅಧ್ಯಕ್ಷ ತೀರ್ಥರಾಮ ಎಚ್.ಬಿ., ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಮಮತ, ಶಾಲಾ ಇಲಾಖೆಯ ಬಿ‌.ಆರ್.ಪಿ. ನಳಿನಿ, ತಾ.ಪಂ. ಮಾಜಿ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾ ಮೇದಪ್ಪ, ಸಭಾ ವೇದಿಕೆ ದಾನಿ ಶ್ರೀಮತಿ ಗೀತಾ ಶೇಖರ್ ಉಳುವಾರು , ವಲಯ ಮೇಲ್ವಿಚಾರಕಿ ಶ್ರೀಮತಿ ಜಯಶ್ರೀ, ಸಿ.ಸಿ.ಟಿ.ವಿ. ದಾನಿ ಶ್ರೀಮತಿ ಜಾನಕಿ , ಸ್ಥಳದಾನಿ ಜನಾರ್ದನ ಕಲ್ಲುಮುಟ್ಲು, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ನಾಯ್ಕ, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಸುರೇಶ್ ಯು.ಕೆ., ಶಾಲಾ ಮುಖ್ಯೋಪಾಧ್ಯಾಯ ಗೋಪಾಲಕೃಷ್ಣ ಬನ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಶಾಲಾ ವಿದ್ಯಾರ್ಥಿ – ವಿದ್ಯಾರ್ಥಿನಿಯರಿಗೆ ನಡೆಸಿದ ವಿವಿಧ ಕ್ರೀಡಾಸ್ಪರ್ಧೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನ ವಿತರಿಸಿದರು. ವಿವಿಧ ದಾನಿಗಳ ಸ್ಮರಣಾರ್ಥ ನೀಡಿದ ದತ್ತಿನಿಧಿ ಪುರಸ್ಕಾರವನ್ನು ನಿವೃತ್ತ ಶಿಕ್ಷಕ ಕೆ.ಆರ್. ಗಂಗಾಧರ ಅವರು ವಿದ್ಯಾರ್ಥಿ – ವಿದ್ಯಾರ್ಥಿನಿಯರಿಗೆ ನೀಡಿದರು.ಈ ಸಂದರ್ಭದಲ್ಲಿ ಶಾಲಾ ವತಿಯಿಂದ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಶಾಲೆಗೆ ವಿವಿಧ ಕೊಡುಗೆಗಳನ್ನು ನೀಡಿದ ದಾನಿಗಳನ್ನು ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳ ಪೋಷಕರು, ಅಕ್ಷರ ದಾಸೋಹ ಸಿಬ್ಬಂದಿಗಳು, ಸಹಶಿಕ್ಷಕವೃಂದದವರು, ಎಸ್.ಡಿ.ಎಂ.ಸಿ. ಪದಾಧಿಕಾರಿಗಳು ಸೇರಿದಂತೆ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.