ಶಾಲಾ ಶಿಕ್ಷಣ ಇಲಾಖೆ ದ.ಕ.ಜಿಲ್ಲಾ ಪಂಚಾಯತ್, ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆ.ಸೋಣಂಗೇರಿ ಮತ್ತು ಶಾಲಾ ಹಿರಿಯ ವಿದ್ಯಾರ್ಥಿ ಸಂಘ ಇದರ ಜಂಟಿ ಆಶ್ರಯದಲ್ಲಿ ಸೋಣಂಗೇರಿ ಶಾಲಾ ವಾರ್ಷಿಕೋತ್ಸವವು
ಡಿ.30ರಂದು ಶಾಲೆಯ ಸುವರ್ಣ ಮಹೋತ್ಸವ ರಂಗಮಂದಿರದಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಡಿ.2ರಂದು ಶಾಲೆಯಲ್ಲಿ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಕುಸುಮಾವತಿ, ಎಸ್.ಡಿ.ಎಂ.ಸಿ. ಅಧ್ಯಕ್ಷೆ ಶ್ರೀಮತಿ ಪ್ರೇಮಾ ಸುರೇಶ್ ರೈ, ಉಪಾಧ್ಯಕ್ಷ ಚಿದಾನಂದ ಕುಕ್ಕಂದೂರು , ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಿರಂಜನ ಮಿತ್ತಮಜಲು, ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ಪ್ರಭಾಕರ ರೈ ಬೇಲ್ಯ, ಹಿರಿಯರಾದ ಸಾಂತಪ್ಪ ಗೌಡ ಮೋಂಟಡ್ಕ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ರವಿಕಲಾ ಚೆನ್ನಪ್ಪ ಗೌಡ ಕಲ್ಲಾಜೆ, ಶಾಲಾ ಶಿಕ್ಷಕಿಯರು, ಶಾಲಾಭಿವೃದ್ಧಿ ಸಮಿತಿ ಸದಸ್ಯರುಗಳು ಹಾಗೂ ಶಾಲಾ ವಿದ್ಯಾರ್ಥಿಗಳು ಹಾಗೂ ಸಮಿತಿಯ ಸರ್ವ ಸದಸ್ಯರುಗಳು ಹಾಗೂ ಊರವರು ಉಪಸ್ಥಿತರಿದ್ದರು.
ಡಿ.೩೦ ರಂದು ವಾರ್ಷಿಕೋತ್ಸವವು ಶಾಲೆಯ ಸುವರ್ಣ ಮಹೋತ್ಸವ ರಂಗಮಂದಿರದಲ್ಲಿ ನಡೆಯಲಿದ್ದು ಪೂರ್ವಾಹ್ನ ಶಾಲಾ ಧ್ವಜಾರೋಹಣವಾದ ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಬಳಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಅಧ್ಯಕ್ಷತೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ವಹಿಸಲಿದ್ದಾರೆ.
ಉದ್ಘಾಟನೆಯನ್ನು ಜಾಲ್ಸೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಮರಸಂಕ ನೆರವೇರಿಸಲಿದ್ದಾರೆ. ಕರ್ನಾಟಕ ರಾಜ್ಯ ಗ್ರಂಥಾಲಯ ನೌಕರರ ಸಂಘದ ಕಾರ್ಯದರ್ಶಿ ಶ್ರೀಮತಿ ಸಾವಿತ್ರಿ ಕಣೆಮರಡ್ಕ ಪ್ರಧಾನ ಭಾಷಣ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಾಲ್ಸೂರು ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಎ.ಎಲ್. ಅಡ್ಕಾರು, ಗ್ರಾ.ಪಂ.ಸದಸ್ಯರಾದ ಈಶ್ವರ ನಾಯ್ಕ ಸೋಣಂಗೇರಿ, ಶಿವಪ್ರಸಾದ್ ಎನ್ ನೀರಬಸಿರಿ, ಶ್ರೀಮತಿ ದೀಪಾ ಅಜಕಳಮೂಲೆ, ಶ್ರೀಮತಿ ಅಂಬಿಕಾ ಕುಕ್ಕನ್ನೂರು, ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ ಬಿ,ಈ., ಕ್ಷೇತ್ರ ಸಮನ್ವಯಾಧಿಕಾರಿಗಳಾದ ಶ್ರೀಮತಿ ಶೀತಲ್, ಶ್ರೀನಿವಾಸ ಕಾಲೇಜು ಫಾರ್ಮಸಿ ಬೆಂಗಳೂರು ಇದರ ಪ್ರೊಫೆಸರ್ ಡಾ| ಕುಮಾರ್ ಪ್ರಸಾದ್ ಎಸ್.ಎ.,ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಬಿಸಿ ಟ್ರಸ್ಟ್ (ರಿ)ಸುಳ್ಯ ಇದರ ಯೋಜನಾಧಿಕಾರಿ ನಾಗೇಶ್ ಪಿ, ನಿವೃತ್ತ ಪ್ರಾಂಶುಪಾಲ ಗೌರಿ ಶಂಕರ್ ಹೊಸಗದ್ದೆ, ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಅನುರಾಧ ಭಾಗವಹಿಸಲಿದ್ದಾರೆ.
ಬಳಿಕ ಶಾಲಾ ಮಕ್ಕಳಿಂದ, ಹಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಕ್ರೀಡಾಕೂಟವು ಡಿ.17ರಂದು ನಡೆಯಲಿದೆ.