ಸುಳ್ಯ ಸೀನಿಯರ್ ಸಿವಿಲ್ ಜಡ್ಜ್ ಮತ್ತು ಜೆಎಮ್ಎಫ್ಸಿ ನ್ಯಾಯಾಲಯದಲ್ಲಿ ಕಳೆದ ಎರಡು ವರ್ಷಗಳಿಂದ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬೊಮ್ಮೇಗೌಡ ಚನ್ನರಾಯಪಟ್ಟಣ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಲಯಕ್ಕೆ ವರ್ಗಾವಣೆ ಗೊಂಡಿರುತ್ತಾರೆ.
ಮೂಲತಃ ಹಾಸನ ಜಿಲ್ಲೆಯ ಭುವನಹಳ್ಳಿ ಗ್ರಾಮದ ಇವರು ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೇರೆ ಬೇರೆ ಕಡೆಗಳಲ್ಲಿ ನ್ಯಾಯಾಲಯದಲ್ಲಿ ಸೇವೆಯನ್ನು ಸಲ್ಲಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ನ್ಯಾಯಾಲಯದಲ್ಲಿ ಉತ್ತಮ ಸೇವೆ ಸಲ್ಲಿಸಿದ ಇವರಿಗೆ ಸಹ ಸಿಬ್ಬಂದಿಗಳು ನವಂಬರ್ 29ರಂದು ಬೀಳ್ಕೊಡುಗೆ ಕಾರ್ಯಕ್ರಮ ನಡೆಸಿ ಶುಭ ಹಾರೈಸಿದರು.
ಪ್ರಸ್ತುತ ತೆರವಾದ ಸ್ಥಾನಕ್ಕೆ ಕಿರಿಯ ನ್ಯಾಯಾಲಯದ ಪ್ರಥಮ ದರ್ಜೆ ಸಹಾಯಕಿ ಮೋಹಿನಿ ಪಿ ಅವರನ್ನು ಪ್ರಭಾರವಾಗಿ ನೇಮಿಸಲಾಗಿದೆ.