ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವರು ಕುಸಿದು ಬಿದ್ದು, ಸ್ಥಳದಲ್ಲೇ ಮೃತಪಟ್ಟ ಘಟನೆ ದ.ಕ. ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ಡಿ.2ರಂದು ಅಪರಾಹ್ನ ಸಂಭವಿಸಿದೆ.
ಸಂಪಾಜೆ ಗ್ರಾಮದ ಎಡ್ಪಾಣೆ ತಿಮ್ಮಪ್ಪ ಪೂಜಾರಿ ಅವರು ತಮ್ಮ ಮನೆಗೆ ನಡೆದುಕೊಂಡು ಹೋಗುವ ದಾರಿಯ ಮದ್ಯೆ ಕುಸಿದು ಬಿದ್ದು ಮೃತಪಟ್ಟಿದ್ದು, ಅವರಿಗೆ 65 ವರ್ಷ ವಯಸ್ಸಾಗಿತ್ತು.
ತಿಮ್ಮಪ್ಪ ಪೂಜಾರಿ ಅವರ ಮೃತದೇಹವನ್ನು ಸುಳ್ಯದ ಸರ್ಕಾರಿ ಆಸ್ಪತೆಗೆ ಮರಣೋತ್ತರ ಪರೀಕ್ಷೆಗಾಗಿ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.
ಮೃತರು ಪತ್ನಿ ವಿಮಲ , ಪುತ್ರರಾದ ವಸಂತ, ಜಯಂತ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.