ಮಂಗಳೂರು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗೆ ಅಭಿಪ್ರಾಯ ಸಂಗ್ರಹ

0

ದ.ಕ .ಜಿಲ್ಲೆಯ ಉಸ್ತುವಾರಿ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧುಬಂಗಾರಪ್ಪ ಅವರು ಡಿ. 2 ರಂದು ಮಲ್ಲಿಕಟ್ಟೆ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ – ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ನಡೆಸಿದರು.
ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮಾಜಿ ಜಿಲ್ಲಾಧ್ಯಕ್ಷ ಸಚಿನ್ ರಾಜ್ ಶೆಟ್ಟಿ, ಕಡಬ ಬ್ಲಾಕ್ ಮಾಜಿ ಅಧ್ಯಕ್ಷರಾದ ಬಾಲಕೃಷ್ಣ ಬಳ್ಳೇರಿ, ಸುಳ್ಯ ಅಕ್ರಮ ಸಕ್ರಮ ಸಮಿತಿ ಮಾಜಿ ಸದಸ್ಯರಾದ ಪ್ರವೀಣ್ ಕುಮಾರ್ ಕೆಡೆಂಜಿಗುತ್ತು ಭಾಗವಹಿಸಿ ಪ್ರಸ್ತುತ ಯಾರಿಗೆ ಟಿಕೆಟ್ ನೀಡಬೇಕು ಹಾಗೂ ಜಿಲ್ಲೆಯ ಸಮಗ್ರ ವಿಚಾರಗಳನ್ನು ಉಸ್ತುವಾರಿ ಮಧುಬಂಗಾರಪ್ಪ ಅವರ ಗಮನಕ್ಕೆ ತಂದಿದ್ದಾರೆ ಎಂದು ಸಚಿನ್ ರಾಜ್ ಶೆಟ್ಟಿ ತಿಳಿಸಿದ್ದಾರೆ.