ಅಮೈ ಮಡಿಯಾರು ಶಾಲೆಯಲ್ಲಿ ಶಿಕ್ಷಕರ ಸಮಾಲೋಚನಾ ಸಭೆ

0

ಅಮೈಮಡಿಯಾರು ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಶಿಕ್ಷಕರ ಸಮಾಲೋಚನಾ ಸಭೆಯು ದ. 2 ರಂದು ನಡೆಯಿತು.
ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಸವಿತಾ.ಎನ್.ಪಿ ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ರಾಮಕ್ಕ ಯು. ಶುಭ ಹಾರೈಸಿದರು. ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಗಳು, ಶಿಕ್ಷಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು 40 ಶಿಕ್ಷಕರು ಭಾಗವಹಿಸಿದ್ದರು.