ಜ. 4 ರಿಂದ ಜ. 8:ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ಜಾತ್ರೋತ್ಸವ, ಆಮಂತ್ರಣ ಪತ್ರ ಬಿಡುಗಡೆ

0

ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಜ. 4ರಿಂದ ಜ. 8ರ ತನಕ‌ ನಡೆಯಲಿದ್ದು, ಆಮಂತ್ರಣ ಪತ್ರ ಬಿಡುಗಡೆ ಡಿ. 3ರಂದು‌ ನಡೆಯಿತು. ಶ್ರೀಮತಿ ಶಾಲಿನಿ ಮತ್ತು ಪುಟ್ಟಣ್ಣ ಮಾಸ್ತರ್ ಆಮಂತ್ರಣ ಪತ್ರ ಹಾಗೂ ಶ್ರೀಮತಿ ಲೋಲಾಕ್ಷಿ ಮತ್ತು ಚೆನ್ನಪ್ಪ ಗೌಡ ಪಂಡಿ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು. ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು, ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಮತ್ತು ಪ್ರಧಾನ ಅರ್ಚಕರಾದ ಎಂ.ವಿ. ಶ್ರೀವತ್ಸ ಕಾಂಜಿ ವೈದಿಕ ವಿಧಿ ನೆರವೇರಿಸಿದರು. ಉತ್ಸವ ಸಮಿತಿ ಗೌರವಾಧ್ಯಕ್ಷ ಭಾಸ್ಕರ ಗೌಡ ಪಂಡಿ, ಅಧ್ಯಕ್ಷ ಸುಬ್ರಹ್ಮಣ್ಯ ಕುಳ ಸೇರಿದಂತೆ ವಿವಿಧ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು, ಬೈಲುವಾರು ಸಮಿತಿಗಳ ಸಂಚಾಲಕರು, ಸದಸ್ಯರು, ಭಕ್ತಾದಿಗಳು ಈ ಸಂದರ್ಭ