ಐವರ್ನಾಡು ಗ್ರಾಮ ಪಂಚಾಯತ್ ಬೃಹತ್ ಸ್ವಚ್ಛತಾ ಕಾರ್ಯಕ್ರಮ

0

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಘಟ ಸಮಿತಿ ಐವರ್ನಾಡಿನ ಸಹಯೋಗದೊಂದಿಗೆ ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆ ಯ ಬದಿಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ವಠಾರ ದಿಂದ ಮಾಡತ್ತಾಕಾನ ದ ವರೆಗೆ ನಡೆಯಿತು.

ಸ್ವಚ್ಛತಾ ಕಾರ್ಯಕ್ರಮ ದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರು,ಸದಸ್ಯರು ,ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಸಿಬ್ಬಂದಿಗಳು, ಓಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಘಟ ಸಮಿತಿ ಐವರ್ನಾಡಿನ ಅಧ್ಯಕ್ಷರು, ಸದಸ್ಯರು,ಮೇಲ್ವಿಚಾರಕರು ಹಾಗೂ ಊರಿನ ಪ್ರಮುಖರು ಭಾಗವಹಿಸಿದರು.