ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಧನುಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುರಾಣ ಪ್ರಸಿದ್ಧ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಧನು ಮಾಸದಲ್ಲಿ ಜರುಗಲಿರುವ ಧನುಪೂಜೆಯ ಆಮಂತ್ರಣ ಪತ್ರಿಕೆಯನ್ನು ಡಿ.3ರಂದು ದೇವಾಲಯದ ಸಭಾಭವನದಲ್ಲಿ ಬಿಡುಗಡೆಗೊಳಿಸಲಾಯಿತು.

ಶ್ರೀ ಮಲ್ಲಿಕಾರ್ಜುನ ದೇವಾಲಯದಲ್ಲಿ ಡಿ.17ರಿಂದ ಜ. 14ರವರೆಗೆ ಪ್ರತಿದಿನ ಬೆಳಿಗ್ಗೆ 5 ಗಂಟೆಗೆ ಧನುಪೂಜೆಯು ಜರುಗಲಿದ್ದು, ಪ್ರತೀ ದಿನ ಬೆಳಿಗ್ಗೆ 4ರಿಂದ ಸುಳ್ಯ ಸೀಮೆಯ ವಿವಿಧ ಭಜನಾ ತಂಡಗಳಿಂದ ಭಜನಾ ಸೇವೆ ನಡೆಯಲಿದೆ.

ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪಿ.ಬಿ. ದಿವಾಕರ ರೈ, ಗುರುಮನೆ ಕೃಷ್ಣ ಬೈಪಡಿತ್ತಾಯ, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಕೇಶವ ಕೊಳಲುಮೂಲೆ, ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯರುಗಳಾದ ಎಸ್.ಪಿ. ಲೋಕನಾಥ, ಶ್ರೀಮತಿ ಮಾಲತಿ ಬೋಜಪ್ಪ, ಶ್ರೀಮತಿ ವೇದಾವತಿ, ದೇವಸ್ಥಾನದ ವ್ಯವಸ್ಥಾಪಕ ಆನಂದ ಕಲ್ಲಗದ್ದೆ, ತೊಡಿಕಾನ ಶ್ರೀ ಮಲ್ಲಿಕಾರ್ಜುನ ಭಜನಾ ಮಂಡಳಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.