ಮೂರು ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಹಿನ್ನೆಲೆ

0

ಸುಳ್ಯ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ವಿಜಯೋತ್ಸವ

ಕಾಂಗ್ರೆಸ್ ಗ್ಯಾರಂಟಿಗಳನ್ನು ಜನತೆ ಧಿಕ್ಕರಿಸಿದ್ದು, ದೇಶಕ್ಕೆ ಮೋದಿಯೇ ಗ್ಯಾರಂಟಿ: ಹರೀಶ್ ಕಂಜಿಪಿಲಿ

ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತಿಸ್ ಗಡ ಸೇರಿದಂತೆ ಮೂರು ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ, ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಸುಳ್ಯ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ಪಕ್ಷದ ಕಛೇರಿಯ ಮುಂಭಾಗದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಡಿ.3ರಂದು ಸಂಜೆ ಪಟಾಕಿ ಸಿಡಿಸಿ, ಸಿಹಿಹಂಚಿ, ವಿಜಯೋತ್ಸವ ಆಚರಿಸಿದರು.

ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಅವರು ಮಾತನಾಡಿ ‘ಪಂಚರಾಜ್ಯಗಳ ಎಕ್ಸಿಟ್ ಪೋಲ್ ನೋಡಿದಾಗ ರಾಜಸ್ಥಾನ ಹೊರತುಪಡಿಸಿ ಉಳಿದೆಲ್ಲಾ ಕಡೆ ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ನೆಕ್ ಟು ನೆಕ್ ಫೈಟ್ ಇದೆ ಎಂದು ವರದಿ ಬಂದಿತ್ತು. ಆದರೆ ಅಲ್ಲಿಯ ಜನತೆ ಕಾಂಗ್ರೆಸ್ಸಿನ ಗ್ಯಾರಂಟಿಗಳ ಹಿಂದೆ ಹೋಗದೆ ಅದನ್ನು ಧಿಕ್ಕರಿಸಿ, ದೇಶದ ಸುರಕ್ಷತೆಯ ದೃಷ್ಟಿಯಿಂದ ನರೇಂದ್ರ ಮೋದಿಯವರ ಗ್ಯಾರಂಟಿಯನ್ನು ಮೆಚ್ಚಿ ಮತ ನೀಡಿದ್ದಾರೆ. ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಉಳಿದಿದ್ದು, ಈ ಚುನಾವಣೆ ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ. ಆದ್ದರಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಕೇಂದ್ರದ ನಾಯಕರು ಯಾರನ್ನು ಅಭ್ಯರ್ಥಿಯಾಗಿ ಮಾಡುತ್ತಾರೆಯೋ ಅವರ ಪರವಾಗಿ ನಾವು ಕೆಲಸ ಮಾಡಬೇಕಾಗಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮೂರು ಲಕ್ಷಕ್ಕೂ ಅಧಿಕ ಮತಗಳಿಂದ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬಂದಿದ್ದೆವು. ಸುಳ್ಯ ವಿಧಾನಸಭಾ ಕ್ಷೇತ್ರದಿಂದಲೂ ಸುಮಾರು 45 ಸಾವಿರದಷ್ಟು ಅಂತರ ಕೊಟ್ಟಿದ್ದೆವು.
ಆದರೆ ಈ ಬಾರಿ ಮತ್ತೊಮ್ಮೆ ಬಿಜೆಪಿ ಅಭ್ಯರ್ಥಿಯನ್ನು ದ.ಕ. ಲೋಕಸಭಾ ಕ್ಷೇತ್ರದಿಂದ ನಾಲ್ಕು ಲಕ್ಷ ಮತಗಳ ಅಂತರ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಸುಮಾರು 60 ಸಾವಿರ ಮತಗಳ ಅಂತರದಿಂದ ಗೆಲ್ಲಿಸುವ ಜವಾಬ್ದಾರಿ ನಮ್ಮ ಮುಂದಿದೆ. ಆದ್ದರಿಂದ ಕಾರ್ಯಕರ್ತರು ಕೇಂದ್ರ ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡಬೇಕು’ ಎಂದು ಹೇಳಿದರು.

ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ಮಾತನಾಡಿ ‘ಲೋಕಸಭಾ ಚುನಾವಣೆಯ ಮುನ್ನ ನಡೆದ ಈ ಚುನಾವಣೆ ಸೆಮಿಫೈನಲ್ ಆಗಿದೆ. ಮುಂದೆ ಬರುವ ಪೈನಲ್ ಚುನಾವಣೆಯಲ್ಲಿ ಬಿಜೆಪಿ ಸುಮಾರು 400 ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ಮೂಲಕ ಮೂರನೇ ಬಾರಿಗೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹೇಳಿದರು.

ನ.ಪಂ. ಮಾಜಿ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ಮಾತನಾಡಿ ರಾಜಸ್ಥಾನ ಮತ್ತು ಛತ್ತಿಸ್ ಗಡ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಹಾಗೂ ಮಧ್ಯಪ್ರದೇಶದಲ್ಲಿ ಬಿಜೆಪಿ ಆಡಳಿತ ಇತ್ತು. ಆದರೆ ಅಲ್ಲಿಯ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಯಿಂದ ಹಿಂದೂಗಳು ಸಂಘಟಿತರಾಗಿ ಬಿಜೆಪಿಯನ್ನು ಗೆಲ್ಲಿಸಿದ್ದಾರೆ. ಬಿಜೆಪಿಯಿಂದ ಮಾತ್ರ ದೇಶದ ಸಮಸ್ಯೆಗೆ ಪರಿಹಾರ ಸಾದ್ಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಎನ್.ಎ. ರಾಮಚಂದ್ರ, ಸಂತೋಷ್ ಕುತ್ತಮೊಟ್ಟೆ, ಕೇಶವ ಅಡ್ತಲೆ, ಬೂಡು ರಾಧಾಕೃಷ್ಣ ರೈ, ಚನಿಯ ಕಲ್ತಡ್ಕ, ಜಗದೀಶ್ ರೈ ಸರಳಿಕುಂಜ, ಶೀನಪ್ಪ ಬಯಂಬು, ರಜತ್ ಅಡ್ಕಾರು, ಜಿನ್ನಪ್ಪ ಪೂಜಾರಿ, ಅಶೋಕ ಅಡ್ಕಾರು, ಮಹೇಶ್ ಕುಮಾರ್ ಮೇನಾಲ, ಗುರುದತ್ ನಾಯಕ್, ಶಿವರಾಮ ಕೇರ್ಪಳ, ಸುಧಾಕರ ತೊಡಿಕಾನ, ಸುನಿಲ್ ಕೇರ್ಪಳ, ಗಿರೀಶ್, ಕೇಶವ ಸಿ‌.ಎ., ಎ.ಟಿ. ಕುಸುಮಾಧರ, ಕಿರಣ್ ಕುರುಂಜಿ, ಶ್ರೀಮತಿ ಕಿಶೋರಿ ಶೇಟ್, ಶ್ರೀಮತಿ ಶಶಿಕಲಾ ನೀರಬಿದಿರೆ ಸೇರಿದಂತೆ ಹಲವಾರು ಮಂದಿ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.