ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಕ ಮಾಡಲಾಗುತಿದ್ದು, ಸರಕಾರದಿಂದ ಮಾನ್ಯತೆ ಪಡೆದ ವಿವಿ ಯಿಂದ ಎಂ.ಬಿ.ಬಿ.ಎಸ್. ಪದವಿ ಹಾಗೂ ಹೌಸ್ ಮೆನ್ ಶಿಪ್ ಆಗಿರುವವರು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
2023 ರ ಡಿಸೆಂಬರ್ 13 ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿ ಮಂಗಳೂರು ಇಲ್ಲಿ ನೇರ ಸಂದರ್ಶನ ನಡೆಯಲಿದೆ.
ಹೆಚ್ಚಿನ ಮಾಹಿತಿಗೆ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.