ಪಂಜ ದೇವಳದ ಆಡಳಿತ ಅಧಿಕಾರಿಯಾಗಿ ತಹಶೀಲ್ದಾರ್ ಅಧಿಕಾರ ಸ್ವೀಕಾರ

0

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಧಾರ್ಮಿಕ ದತ್ತಿ ಇಲಾಖೆಯ ಆದೇಶದಂತೆ ತಹಶೀಲ್ದಾರ್ ಜಿ.ಮಂಜುನಾಥ್ ರವರು ದ.4 ರಂದು ಅಧಿಕಾರ ಸ್ವೀಕರಿಸಿದರು.

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ರೈ ಅಗೋಳಿಬೈಲುಗುತ್ತು ರವರು ಅಧಿಕಾರ ಹಸ್ತಾಂತರಿಸಿದರು.ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಸದಸ್ಯರು, ಅರ್ಚಕರು,ಸಿಬ್ಬಂದಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.