ಕಲ್ಲುಗುಂಡಿ ಹಿ.ಪ್ರಾ.ಶಾಲಾ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾಕೂಟ

0

ದ.ಕ. ಸಂಪಾಜೆ ಗ್ರಾಮದ ಕಲ್ಲುಗುಂಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಶಾಲಾ ಮಕ್ಕಳಿಗೆ ಕ್ರೀಡಾ ಕೂಟವು ಡಿ.5ರಂದು ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಮತಿ ಶಕ್ತಿವೇಲು ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ, ಶುಭಹಾರೈಸಿದರು.
ಈ ಸಂದರ್ಭದಲ್ಲಿ ಗ್ರಾ.ಪಂ. ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ, ಉಪಾಧ್ಯಕ್ಷ ಎಸ್. ಕೆ. ಹನೀಫ್ ಕಲ್ಲುಗುಂಡಿ, ಮಾಜಿ ಅಧ್ಯಕ್ಷೆ ಶ್ರೀಮತಿ ಸುಂದರಿ ಮುಂಡಡ್ಕ, ಪ್ರೌಢಶಾಲೆ ಎಸ್. ಡಿ. ಎಮ್. ಸಿ ಅಧ್ಯಕ್ಷ ಹೊನ್ನಪ್ಪ ಆಚಾರ್ಯ, ಹಿರಿಯ ಪ್ರಾಥಮಿಕ ಶಾಲಾ ಅಧ್ಯಕ್ಷ ಮಹಮ್ಮದ್ ಹನೀಫ್, ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.