ಗೂನಡ್ಕ: ಕಾರು – ಲಾರಿ ಅಪಘಾತ ಕಾರು ಚಾಲಕನಿಗೆ ಗಂಭೀರ ಗಾಯ

0

ಮಂಗಳೂರಿನ ಆಸ್ಪತ್ರೆಗೆ ರವಾನೆ

ಕಾರು ಹಾಗೂ ಲಾರಿ ಮಧ್ಯೆ ಪರಸ್ಪರ ಅಪಘಾತ ಸಂಭವಿಸಿ, ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ದ.ಕ‌. ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಡಿ.6ರಂದು ಸಂಜೆ ಸಂಭವಿಸಿದೆ.

ಕಲ್ಲುಗುಂಡಿಯ ಶಿವಪ್ಪ ಬೊಳುಗಲ್ಲು ಎಂಬವರು ತನ್ನ ಕಾರಿನಲ್ಲಿ ಸಂಪಾಜೆಯಿಂದ ಸುಳ್ಯಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಗೂನಡ್ಕದಲ್ಲಿ ಕಾರಿಗೆ ಲಾರಿ ಢಿಕ್ಕಿ ಹೊಡೆದಿದ್ದು, ಚಾಲಕ ಶಿವಪ್ಪ ಅವರು ಗಂಭೀರವಾಗಿ ಗಾಯಗೊಂಡರೆನ್ನಲಾಗಿದೆ.
ತಕ್ಷಣ ಸ್ಥಳೀಯರು ಅವರನ್ನು ಕಾರಿನಿಂದ ಹೊರಗೆಳೆದು ಸುಳ್ಯ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ, ವೈದ್ಯರ ಸಲಹೆ ಮೇರೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿರುವುದಾಗಿ ತಿಳಿದುಬಂದಿದೆ.