ಕನಕಮಜಲು: ಕೋಡಿ ತಿರುವಿನಲ್ಲಿ ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ ಚಾಲಕ ಅಪಾಯದಿಂದ ಪಾರು

0

ಹೆದ್ದಾರಿ ಸಂಚಾರ ಅಸ್ತವ್ಯಸ್ತ

ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕನಕಮಜಲು ಗ್ರಾಮದ ಕೋಡಿ ತಿರುವಿನಲ್ಲಿ ಡಿ.7ರಂದು ಅಪರಾಹ್ನ ಸಂಭವಿಸಿದೆ.

ಮಂಗಳೂರಿನಿಂದ ಮೈಸೂರಿಗೆ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ಕಳೆದು ಪಲ್ಟಿಯಾಗಿದ್ದು, ಚಾಲಕ ಅಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ. ಪರಿಣಾಮವಾಗಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ.