ಬಾಳಿಲ ವಿದ್ಯಾ ಬೋಧಿನೀ ಪ್ರೌಢಶಾಲೆ ವಾರ್ಷಿಕೋತ್ಸವ

0

ಬಾಳಿಲ ವಿದ್ಯಾಬೋಧಿನೀ ಪ್ರೌಢ ಶಾಲೆಯ ವಾರ್ಷಿಕೋತ್ಸವ ಮತ್ತು ಅಭಿನಂದನಾ ಸಮಾರಂಭ ಡಿ. 6 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದ ಸುಳ್ಯ ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ ಕೆರೆಯವರು “ನಮ್ಮ ಆಯ್ಕೆಯೇ ನಮ್ಮ ಭವಿಷ್ಯವನ್ನು ರೂಪಿಸುತ್ತದೆ. ಶಿಕ್ಷಣದ ಜತೆಗೆ ಜೀವನ ಶಿಕ್ಷಣ ಕೂಡಾ ಅಳವಡಿಸಿಕೊಂಡು ಮುನ್ನಡೆಯಬೇಕು ಎಂದರು. ಅಭ್ಯಾಗತರಾಗಿ ಬಾಳಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪಾವನ ಜೋಗಿಬೆಟ್ಟು, ಕ್ಷೇತ್ರ ಶಿಕ್ಷಣ ಸಂಯೋಜಕಿ ಶ್ರೀಮತಿ ಸಂಧ್ಯಾಕುಮಾರಿ ಉಪಸ್ಥಿತರಿದ್ದು ಶುಭಾಶಯದ ನುಡಿಗಳನ್ನು ಆಡಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಗಣಿತ ಶಿಕ್ಷಕರಾದ ಉದಯಕುಮಾರ್ ರೈ ಎಸ್ ಇವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಹಿರಿಯ ವಿದ್ಯಾರ್ಥಿಯಾಗಿರುವ ಕಡಬ ತಾಲೂಕು ಪ್ರಥಮ ದರ್ಜೆ ಸಹಾಯಕ ಕೌಶಿಕ್ ಕೆ.ಎಂ. ಅಭಿನಂದನಾ ಮಾತುಗಳನ್ನಾಡಿ ತನ್ನ ಗುರುವಿನ ನೇರ ನುಡಿ, ಪಾರದರ್ಶಕತೆ, ಕರಾರುವಕ್ಕುತನವನ್ನು ಕೊಂಡಾಡಿದರು. ಶಿಕ್ಷಕಿ ಕವಿತಾ ಕೆ. ಎನ್. ಸನ್ಮಾನ ಪತ್ರ ವಾಚಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಳಿಲ ವಿದ್ಯಾ ಬೋಧಿನೀ ಎಜುಕೇಶನಲ್ ಸೊಸೈಟಿ ಅಧ್ಯಕ್ಷ ರಾಧಾಕೃಷ್ಣ ರಾವ್ ಯು. ವಹಿಸಿದ್ದರು.

ಆಡಳಿತ ಮಂಡಳಿಯ ಕೋಶಾಧಿಕಾರಿ ಕೈಂತಜೆ ರಾಮ ಭಟ್ , ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶಿವಪ್ರಸಾದ್, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಧನಂಜಯ ಶೆಟ್ಟಿ ಉಪಸ್ಥಿತರಿದ್ದರು. ಶಾಲಾ ಸಂಚಾಲಕ ಪಿ.ಜಿ.ಎಸ್.ಎನ್. ಪ್ರಸಾದ್ ಸ್ವಾಗತಿಸಿದರು. ಶಾಲಾ ಮುಖ್ಯೋಪಾಧ್ಯಾಯ ಯಶೋಧರ ಎನ್. ವರದಿ ವಾಚನ ಮಾಡಿದರು. ಶಿಕ್ಷಕಿ ಸಹನಾ ಬಿ.ಬಿ. ವಂದನಾರ್ಪಣೆಗೈದರು. ಹತ್ತನೇ ತರಗತಿ ವಿದ್ಯಾರ್ಥಿಗಳಾದ ಚಿಂತನಾ ಕೆ ಮತ್ತು ರಕ್ಷಾ ಎನ್.ಸಿ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಕ್ರೀಡೆ, ಪೋಷಕರ ಕ್ರೀಡಾಕೂಟ, ಸಾಹಿತ್ಯಿಕ , ಪ್ರವಾಸಕ್ಕೆ ಸಂಬಂಧಿಸಿದ ವಿಶೇಷ ಬಹುಮಾನಗಳನ್ನು ವಿತರಿಸಲಾಯಿತು. ಸಂಸ್ಥಾಪಕರಾದ ದಿವಂಗತ ನೆಟ್ಟಾರು ವೆಂಕಟ ಸುಬ್ಬರಾವ್ ಮೆಮೊರಿಯಲ್ ಟ್ರಸ್ಟ್ ಬಾಳಿಲ ಇದರ ಪ್ರಾಯೋಜಕತ್ವದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ರಸಪ್ರಶ್ನೆ ಸ್ಪಧೆಯ ಬಹುಮಾನಗಳನ್ನು ವಿತರಿಸಲಾಯಿತು.