ಕೆ.ವಿ.ಜಿ. ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ತುರ್ತು ಜೀವನಾಧಾರ ಅರಿವು ಕಾರ್ಯಕ್ರಮ

0

ಕೆವಿಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಬಾಯಿ, ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಾ ವಿಭಾಗದ ವತಿಯಿಂದ ಸಿ.ಪಿ.ಆರ್. Cardiopulmonary resuscitation (ಹೃದಯದ ಪುನರುಜ್ಜೀವನ) ಅರಿವು ಕಾರ್ಯಕ್ರಮವನ್ನು ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ ಇನ್ ಮೆಡಿಕಲ್ ಸೈನ್ಸ್ ಮತ್ತು ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾ ನಿರ್ದೇಶನದಂತೆ ಡಿ.೬ ರಂದು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಿ.ಪಿ.ಆರ್. ನೀಡುವ ವೀಡಿಯೋ ಪ್ರಾತ್ಯಕ್ಷಿಕೆಯನ್ನು ಪ್ರಸಾರ ಮಾಡಲಾಯಿತು. ಅನಂತರ, ಮನುಷ್ಯ ಮಾದರಿಯ ಮೇಲೆ ಸಿ.ಪಿ.ಆರ್. ಪ್ರದರ್ಶನ ಹಾಗೂ ಪ್ರಾತ್ಯಕ್ಷಿಕೆ ನೀಡಲಾಯಿತು.
ಕಾರ್ಯಕ್ರಮದ ಅಂತ್ಯದಲ್ಲಿ ಭಾಗವಹಿಸಿದ ವಿದ್ಯಾರ್ಥಿ ಹಾಗೂ ದಂತವೈದ್ಯರುಗಳಿಗೆ ಇ-ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಸಮಾಜದಲ್ಲಿ ಹೆಚ್ಚುತ್ತಿರುವ ಹೃದಯಸ್ತಂಭನಕ್ಕೊಳಗಾಗಿ ಮರಣವನ್ನಪ್ಪುವ ಸಂದರ್ಭದಲ್ಲಿ ಹೃದಯವನ್ನು ತುರ್ತು ಪುನರುಜ್ಜೀವನಗೊಳಿಸುವ ಜಾಗೃತಿಯನ್ನು ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕೆವಿಜಿ ದಂತ ಮಹಾವಿದ್ಯಾಲಯದ ೪೦೦ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.