ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಸಂಪಾಜೆಯ ಮೋಹನ್ ಗೆ ಜಾಮೀನು

0

ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ 11ನೇ ಆರೋಪಿ ಮೂಲತಃ ಪುತ್ತೂರು ಚಿಕ್ಕಮುಡ್ನೂರು ಕೆಮ್ಮಾಯಿನವಾಗಿರುವ, ಸುಳ್ಯ ತಾಲೂಕಿನ ಸಂಪಾಜೆ ನಿವಾಸಿ ಮೋಹನ್ ನಾಯಕ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

2017 ಸೆ.5ರಂದು ಹತ್ಯೆಗೀಡಾಗಿದ್ದು, ತನಿಖೆಗಾಗಿ ವಿಶೇಷ ತನಿಖಾ ದಳ ರಚಿಸಲಾಗಿತ್ತು. ಹತ್ಯೆ ಪ್ರಕರಣದಲ್ಲಿ 18 ಆರೋಪಿಗಳು ಬಂಧನಕ್ಕೊಳಗಾಗಿದ್ದು, 1200 ಪುರಾವೆ ಹಾಗೂ 438 ಸಾಕ್ಷ್ಯ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ.
ವಿಚಾರಣೆ ನಡೆಸಿರುವ ವಿಶೇಷ ನ್ಯಾಯಾಲಯ ತೀರ್ಪು ಕಾಯ್ದಿರಿಸಿದ 45 ದಿನಗಳ ಬಳಕ ಆರೋಪಿ ಮೋಹನ್ ನಾಯಕ್ ಅವರಿಗೆ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠ ಜಾಮೀನು ಮಂಜೂರುಗೊಳಿಸಿದೆ.