ಮಕ್ಕಳ ರಕ್ತ ಹೀನತೆ ತಪಾಸಣೆ, ಚಿಕಿತ್ಸೆ
ಕರ್ನಾಟಕ ಸರಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದೊಂದಿಗೆ ಅನೀಮಿಯ ಮುಕ್ತ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮದಡಿಯಲ್ಲಿ ಮಕ್ಕಳ ರಕ್ತಹೀನತೆ ತಪಾಸಣೆ ಮತ್ತು ಚಿಕಿತ್ಸೆ ಕಾರ್ಯಕ್ರಮ ಸುಳ್ಯದ ಕುರುಂಜಿಭಾಗ್ ಅಮರಜ್ಯೋತಿ ಪಿ.ಯು. ಕಾಲೇಜಿನಲ್ಲಿ ಡಿ.8 ರಂದು ಹಮ್ಮಿಕೊಳ್ಳಲಾಯಿತು.
ತಾಲೂಕು ಆರೋಗ್ಯಾಧಿಕಾರಿ ಕಚೇರಿಯಿಂದ ಆರ್ ಬಿ ಎಸ್ ಕೆ ವೈದ್ಯಾಧಿಕಾರಿ ಡಾ.ಭವ್ಯಾ ಹಾಗೂ ಸಿಬ್ಬಂದಿಗಳಾದ ನೇತ್ರಾಧಿಕಾರಿ ಆರ್ ಬಿ ಎಸ್ ಕೆ ರೋಹಿತ್, ಕಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ನವ್ಯಾ ಮತ್ತು ಸಮುದಾಯ ಆರೋಗ್ಯಾಧಿಕಾರಿ ಕ್ರಿಸ್ಟಲ್ ಕ್ರಾಸ್ ತಪಾಸಣೆ ನಡೆಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಯಶೋದಾ ರಾಮಚಂದ್ರ ಹಾಗೂ ಉಪನ್ಯಾಸಕರು, ಸಿಬ್ಬಂದಿಗಳು ಭಾಗವಹಿಸಿದ್ದರು.