ಶ್ರೀ ಶಾರದಾ ಪ್ರೌಢ ಶಾಲೆ ಮತ್ತು ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ- ಸಾಂಸ್ಕೃತಿಕ ಸಂಭ್ರಮ

0

ಸುಳ್ಯದ ಶ್ರೀ ಶಾರದಾ ಹೆಣ್ಮಕ್ಕಳ ಪ್ರೌಢ ಶಾಲೆ ಮತ್ತು ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಡಿ.9ರಂದು ಸುಳ್ಯದ ಅಮೃತ ಭವನದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿದ್ದ ಬಂಟ್ವಾಳ ತಾಲೂಕಿನ ತುಂಬೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ರಾಜ್ಯ ಉತ್ತಮ ಪ್ರಾಂಶುಪಾಲರ ಪ್ರಶಸ್ತಿ ವಿಜೇತ ರಾದ ಗಂಗಾಧರ ಆಳ್ವ ಸಮಾರಂಭವನ್ನು ಉದ್ಘಾಟಿಸಿದರು. ದ.ಕ.ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಧನಂಜಯ ಅಪ್ಪಂಗಾಯ ಅಧ್ಯಕ್ಷತೆ ವಹಿಸಿದ್ದರು. ಗೌಡ ವಿದ್ಯಾ ಸಂಘದ ನಿರ್ದೇಶಕರಾದ ಜಯರಾಮ ಚಿತ್ತಡ್ಕ, ಕಾಲೇಜು ವಿಭಾಗದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ದಿವೀಶ್ ಕುಮಾರ್, ಪ್ರೌಢಶಾಲಾ ವಿಭಾಗದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ನಾರಾಯಣ ಜಟ್ಟಿಪಳ್ಳ, ಕಾಲೇಜಿನ ಸ್ಟುಡೆಂಟ್ಸ್ ಕೌನ್ಸಿಲ್ ಅಧ್ಯಕ್ಷೆ ಪರಿಷ್ಮಾ, ಕಾರ್ಯದರ್ಶಿ ಸಹಲಾ, ಪ್ರೌಢಶಾಲಾ ಸ್ಟುಡೆಂಟ್ಸ್ ಕೌನ್ಸಿಲ್ ಅಧ್ಯಕ್ಷೆ ಹಂಸಿಕಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದಯಾಮಣಿ ಕೆ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಭಾರತಿ ವರದಿ ವಾಚಿಸಿದರು. ಉಪನ್ಯಾಸಕಿ ಸ್ವರ್ಣಕಲಾ ವಂದಿಸಿದರು. ವಿದ್ಯಾರ್ಥಿನಿಯರಾದ ಸಪ್ಪಾ ಹಾಗೂ ಸುಷ್ಮಾ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು. ಪಿಯು ವಿಭಾಗದ ರಾಜ್ಯಮಟ್ಟದ ಕಬಡ್ಡಿ ಆಟಗಾರ್ತಿ ಕೃತಿ. ಎಲ್ ಹಾಗೂ ಪ್ರೌಢ ಶಾಲಾ ರಾಜ್ಯ ಮಟ್ಟದ ವೆಸ್ಟ್ ಲಿಫ್ಟಿರ್ ಶ್ರೇಯ ರನ್ನು ಸನ್ಮಾನಿಸಲಾಯಿತು.

ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.