ರಾಜ್ಯ ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತರಾದ ಸವಣೂರಿನ ಶಿಲ್ಪಿ ಸವಣೂರು ಕೆ. ಸೀತಾರಾಮ ರೈಯವರ ಸಂಚಾಲಕತ್ವದಲ್ಲಿ ಮುನ್ನಡೆಯುತ್ತಿರುವ ಸವಣೂರಿನ ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳು ಶಿಕ್ಷಣಾರ್ಥಿಗಳ ಭವಿಷ್ಯ ಬರೆಯುವ ವಿದ್ಯಾಕೇಂದ್ರವಾಗಿ ಬೆಳಗುತ್ತಿದೆ.
ಸಮೂಹ ಶಿಕ್ಷಣ ಸಂಸ್ಥೆಯಲ್ಲಿ LKG ಯಿಂದ ತೊಡಗಿ ಪಿಯುಸಿ (Science- PCMB/PCMC, COMMERCE-EBAS/EBAC), ಪದವಿ BCA(Artificial Intelligence), B.Com & BA ವರೆಗಿನ ವ್ಯಾಸಂಗಗಳು ಒಂದೇ ಸೂರಿನಡಿ ಲಭ್ಯವಿದೆ. ಕಲಿಕೆಗೆ ಸಂಬಂಧಿಸಿದಂತೆ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿರುವ ತರಗತಿ ಲ್ಯಾಬೋರೇಟರಿ, ಸುಸಜ್ಜಿತ ತರಗತಿ ಕೊಠಡಿಗಳು, ವಸತಿ ನಿಲಯಗಳು, ಶಾಲಾ ವಾಹನಗಳನ್ನು ಹೊಂದಿದೆ. 10ನೇ ತರಗತಿಯಲ್ಲಿ 15 ಬಾರಿ ಶೇ. 100 ಫಲಿತಾಂಶ, ವಾಣಿಜ್ಯ ವಿಭಾಗದಲ್ಲಿ 8 ಬಾರಿ ಮತ್ತು ವಿಜ್ಞಾನ ವಿಭಾಗದಲ್ಲಿ 3 ಬಾರಿ ಶೇ. 100 ಫಲಿತಾಂಶ ದಾಖಲಿಸಿ ಅತ್ತ್ಯುತ್ತಮ ಶಿಕ್ಷಣ ಸಂಸ್ಥೆ ಎಂಬ ಹೆಗ್ಗಳಿಕೆ ಪಾತ್ರವಾದ ಈ ಸಂಸ್ಥೆಯಲ್ಲಿ ಡಿ. 15ರಂದು ಸಂಸ್ಥೆಯ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 9.30ರಿಂದ ಸನ್ಮಾನ ರಶ್ಮಿ ಕಾರ್ಯಕ್ರಮ ನಡೆಯಲಿದ್ದು, ರಾಮಕೃಷ್ಣ ಹೈಸ್ಕೂಲ್ ನಿವೃತ್ತ ಮುಖ್ಯ ಶಿಕ್ಷಕ ಶ್ರೀಧರ್ ರೈ ಹೆಚ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಸಂಸ್ಥೆಯ ಸಂಚಾಲಕರಾದ ಸವಣೂರು ಕೆ. ಸೀತಾರಾಮ ರೈ, ಎಸ್.ಎನ್.ಆರ್. ರೂರಲ್ ಎಜ್ಯುಕೇಶನ್ ಟ್ರಸ್ಟಿನ ಟ್ರಸ್ಟಿ ಎನ್. ಸುಂದರ ರೈ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ರಾಮ್ ಪ್ರಸಾದ್ ರೈ ಕಲಾಯುಗುತ್ತು ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ. ಡಿ. 16ರಂದು ಸಂಜೆ 5.30ರಿಂದ ಸಂಭ್ರಮ ರಶ್ಮಿ ನಡೆಯಲಿದ್ದು, ಪುತ್ತೂರು ಎ.ಸಿ. ಗಿರೀಶ್ ನಂದನ್ ಎಂ, ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್, ಮಂಗಳೂರು ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ಕೃಷ್ಣರಾಜ್ ಹೆಗ್ಡೆ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳ ಸಂಚಾಕರಾದ ಸವಣೂರು ಕೆ. ಸೀತಾರಾಮ ರೈ, ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.