ಡಿ. 17 : ಕಲ್ಮಡ್ಕ ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕೋತ್ಸವ

0

ಕಲ್ಮಡ್ಕ ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕೋತ್ಸವ ಡಿ. 17ರಂದು ಕಲ್ಮಡ್ಕದಲ್ಲಿ ನಡೆಯಲಿದ್ದು, ಈ ಬಗ್ಗೆ ಡಿ. 10ರಂದು ವಿವಿಧ ಕ್ರೀಡಾಕೂಟ ನಡೆಯಲಿದೆ. ಬೆಳಿಗ್ಗೆ ಸಂಘದ ಅಧ್ಯಕ್ಷ ರವಿಚಂದ್ರ ಕಾಚಿಲರ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಬಳಿಕ ವಿವಿಧ ಕ್ರೀಡಾಸ್ಪರ್ಧೆಗಳು ನಡೆದು ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ.


ಡಿ. 17ರಂದು ಬೆಳಿಗ್ಗೆ ಗಣಪತಿ ಹವನ, ಸತ್ಯನಾರಾಯಣ ಪೂಜೆ ಆರಂಭ ಬಳಿಕ ಸಂಘದ ಅಧ್ಯಕ್ಷ ರವಿಚಂದ್ರ ಕಾಚಿಲರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಜರಗಲಿದೆ. ವಿವಿಧ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಘದ ಪೂರ್ವಾಧ್ಯಕ್ಷ ರುಕ್ಮಯ್ಯ ನಾಯ್ಕ ಧರ್ಮಡ್ಕ, ನಾಟಿವೈದ್ಯೆ ಶ್ರೀಮತಿ ಕಮಲ ಶೇಡಿಕರೆ ಮತ್ತು ಶ್ರೀಮತಿ ಕುಸುಮ ಶಿವಪ್ಪ ನಾಯ್ಕ್ ಮಾಳಪ್ಪಮಕ್ಕಿಯವರಿಗೆ ಸನ್ಮಾನ ಕಾರ್ಯಕ್ರಮ, ಭಜನಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಸಂಘದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.