ಸಂಪಾಜೆ : ಆರ್ ಎಂ ಎಸ್ ಎ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಾರ್ಷಿಕೋತ್ಸವ ಸಂಭ್ರಮ

0

ಸಂಪಾಜೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮತ್ತು ಸಂಪಾಜೆ ಸರಕಾರಿ ಪ್ರೌಢಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಡಿ 11 ರಂದು ನಡೆಯಿತು.


ಸಂಪಾಜೆ ಗ್ರಾ. ಪಂ. ಅಧ್ಯಕ್ಷೆ ಶ್ರೀಮತಿ ಸುಮತಿ ಶಕ್ತಿವೇಲು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸೋಮಶೇಖರ ಕೊಯಿಂಗಾಜೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಡಿಕೇರಿ ಆಕಾಶವಾಣಿ ಯ ಹಿರಿಯ ಉದ್ಘೋ ಷಕರಾದ ಸುಬ್ರಾಯ ಸಂಪಾಜೆ ಪ್ರಧಾನ ಭಾಷಣಕಾರರಾಗಿದ್ದರು. ಗ್ರಾಮ ಪಂಚಾಯತ್ ಸದಸ್ಯರು, ಶಾಲೆಯ ಹಿತೈಷಿ, ದಾನಿಗಳಾದ ಕೊಂದಲಕಾಡು ನಾರಾಯಣ ಭಟ್, ಶಾಲಾ ಎಸ್ ಡಿಎಂಸಿ ಯ ಪ್ರೌಢ ಶಾಲಾ ವಿಭಾಗದ ಅಧ್ಯಕ್ಷರಾದ ಹೊನ್ನಪ್ಪ ಆಚಾರ್ಯ ಮತ್ತು ಪ್ರಾಥಮಿಕ ವಿಭಾಗದ ಅಧ್ಯಕ್ಷರಾದ ಮೊ. ಹನೀಫ್ ಹಾಗೂ ಪ್ರೌಢ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಜಯಶ್ರೀ ಮತ್ತು ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಚಂದ್ರಾವತಿ ವೇದಿಕೆಯಲ್ಲಿದ್ದರು. ಈ ಸಂದರ್ಭದಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಬಹುಮಾನ ವಿತರಣೆ ನಡೆಯಿತು. ಅಪರಾಹ್ನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.