ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಜ.16 ರಿಂದ 21 ರ ತನಕ ನಡೆಯಲಿರುವ ಜಾತ್ರಾ ಮಹೋತ್ಸವ ಹಾಗೂ ಶತ ವರ್ಷಗಳ ಬಳಿಕ ನಡೆಯಲಿರುವ ಬ್ರಹ್ಮರಥ ಸಮರ್ಪಣೆಯ ಪ್ರಯುಕ್ತ ಚಪ್ಪರ ಮುಹೂರ್ತ ಡಿ.14 ರಂದು ನಡೆಯಿತು.
ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿತು. ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಸದಸ್ಯರಾದ ಸದಸ್ಯರಾದ ಪಿ.ವೆಂಕಟಕೃಷ್ಣ ರಾವ್, ನಾರಾಯಣ ಕೊಂಡೆಪ್ಪಾಡಿ, ಪಿ.ಜಗನ್ನಾಥ ರೈ, ದಾಮೋದರ ನಾಯ್ಕ, ಸಂಚಾರ ಠಾಣಾ ನಿವೃತ್ತ ಎಸ್ ಐ ವಿಠಲ ಶೆಟ್ಟಿ ಪೆರುವಾಜೆ, ಮಾಜಿ ಸೈನಿಕ ಸುಧಾನಂದ, ಕ್ಷೇತ್ರದ ಕಚೇರಿ ವ್ಯವಸ್ಥಾಪಕ ವಸಂತ ಪೆರುವಾಜೆ ಮೊದಲಾದವರು ಉಪಸ್ಥಿತರಿದ್ದರು.