ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಅಡಿಕೆ ಮತ್ತು ಕೊಕ್ಕೊ ಬೆಳೆಗಳಲ್ಲಿ ಉತ್ತಮ ಬೇಸಾಯ ಪದ್ಧತಿಗಳು ಎಂಬ ಮಾಹಿತಿ ಕಾರ್ಯಾಗಾರವು ಡಿ.21 ರಂದು ಬೆಳಿಗ್ಗೆ ಗಂಟೆ 10.30 ಕ್ಕೆ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥರವರು ವಹಿಸಲಿದ್ದಾರೆ.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ಬಾಲ್ಯೊಟ್ಟು ಕಾರ್ಯಾಗಾರ ಉದ್ಘಾಟಿಸಲಿದ್ದಾರೆ.
ಭಾರತೀಯ ಕೃಷಿ ಸಂಶೋಧನಾ ಪರಿಷತ್ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ಪ್ರಾಂತೀಯ ಕ್ಷೇತ್ರ ವಿಟ್ಲ ಇದರ ಹಿರಿಯ ವಿಜ್ಞಾನಿ ಡಾ.ನಾಗರಾಜ ಎನ್.ಆರ್ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲೀಲಾವತಿ ಕುತ್ಯಾಡಿ, ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ ಭಾಗವಹಿಸಲಿದ್ದಾರೆ.
ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಮಸಹಿತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥರವರು ತಿಳಿಸಿದ್ದಾರೆ.