ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಇಂದು ಆರಂಭಗೊಂಡಿತು.
ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮಗಳು ಆರಂಭಗೊಂಡಿದ್ದು ಇಂದು ಬೆಳಿಗ್ಗೆ ದೇವತಾ ಪ್ರಾರ್ಥನೆ ,ಮಹಾ ಗಣಪತಿ ಹೋಮ ಸಹಿತ ವಿವಿಧ ವೈದಿಕ ಕಾರ್ಯಕ್ರಮಗಳು, ಹಸಿರು ಹೊರೆ ಕಾಣಿಕೆ ಸಮರ್ಪಣೆ, ತೋರಣ ಮುಹೂರ್ತ, ಮಧ್ಯಾಹ್ನ ಚಂಡಿಕಾಯಾಗದ ಪೂರ್ಣಾಹುತಿ,ಸುಹಾಸಿನಿ ಪೂಜೆ ,ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ನಡುಬೈಲು ಮತ್ತು ಸಮಿತಿಯ ಸದಸ್ಯರು,ವಿವಿಧ ಸಮಿತಿಯವರು, ಊರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.